ಯಾದಗಿರಿ | ಪ್ರತಿಭಾ ಕಾರಂಜಿ : ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

Update: 2025-01-05 14:20 GMT

ಯಾದಿಗಿರಿ : ಸುರಪುರ ತಾಲೂಕಿನ ಕೋನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ರೇಖಾ ಈರಣ್ಣ ಇತ್ತೀಚೆಗೆ ಯಾದಗಿರಿಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಕನ್ನಡ ಕವನ ವಾಚನ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ವಿದ್ಯಾರ್ಥಿನಿಯ ಸಾಧನೆಗೆ ಎಸ್ಡಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಗ್ರಾಮದ ಮುಖಂಡರು, ಗ್ರಾಮಸ್ಥರು, ಶಾಲೆಯ ಮುಖ್ಯಗುರುಗಳು ಬಸಮ್ಮ ಪಾಟೀಲ್, ಸಹ ಶಿಕ್ಷಕರಾದ ಸಲ್ಮಾ, ಸಿದ್ದಪ್ಪ, ಅತಿಥಿ ಶಿಕ್ಷಕರಾದ ಶೋಭಾ ಪಾಟೀಲ್, ಈರಮ್ಮ ಸರ್ಜಾಪುರ, ನಿರ್ಮಲಾ ಮತ್ತು ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

ಅದರಂತೆ ತಾಲೂಕಿನ ರುಕ್ಮಾಪುರ ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ವಿದ್ಯಾ ದೇವಿಂದ್ರಪ್ಪ ಯಾಳಗಿ ಧಾರ್ಮಿಕ ಪಠಣ ಸಂಸ್ಕೃತ ವಿಷಯದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ಮೆರೆದಿದ್ದಾಳೆ.

ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಮುಖ್ಯಗುರು ಮಹೇಶ ಕುಂಟೋಜಿ ಸೇರಿದಂತೆ ಎಲ್ಲಾ ಶಿಕ್ಷಕರು, ಸಿಬ್ಬಂದಿ ಹಾಗೂ ಶಾಲಾ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News