ಯಾದಗಿರಿ | ಕನಕದಾಸ ಜಯಂತಿ ಆಚರಣೆಯ ಪೂರ್ವಭಾವಿ ಸಭೆ
ಯಾದಗಿರಿ : ನ.18ರಂದು ಕನಕದಾಸರ ಜಯಂತಿ ಆಚರಣೆ ಇದ್ದು ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಲ್ಲಿ, ಕಚೇರಿ, ಪಂಚಾಯತ್‌ಗಳಲ್ಲಿ ಕಡ್ಡಾಯವಾಗಿ ಆಚರಣೆ ಮಾಡುವಂತೆ ತಹಶೀಲ್ದಾರ್ ಹುಸೇನಸಾಬ್ ಎ.ಸರಕಾವಸ್ ತಿಳಿಸಿದ್ದಾರೆ.
ಸುರಪುರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9 ಗಂಟೆಗೆ ಬಸ್ ನಿಲ್ದಾಣದ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಮಹಾತ್ಮಾ ಗಾಂಧಿ ವೃತ್ತದ ಮಾರ್ಗವಾಗಿ ತಹಶೀಲ್ದಾರ್ ಕಚೇರಿ ವರೆಗೆ ಕನಕದಾಸರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ನಂತರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದಿಂದ ಕನಕದಾಸರ ಜಯಂತಿ ಆಚರಣೆ, ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ತಪ್ಪದೆ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗವಹಿಸಬೇಕು ಎಂದರು.
ಸಭೆಯಲ್ಲಿ ತಾಲ್ಲೂಕು ಪಂಚಾಯತ್ ಇಓ ಬಸವರಾಜ ಸಜ್ಜನ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ ನಾಯಕ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಹಣಮಂತ್ರಾಯ್ ಪಾಟೀಲ್, ಕೃಷಿ ಇಲಾಖೆ ಎಡಿ ಭೀಮರಾಯ ಹವಲ್ದಾರ್, ಮುಖಂಡರಾದ ವಕೀಲ ಯಲ್ಲಪ್ಪ ಹುಲಿಕಲ್, ರಂಗನಗೌಡ ಪಾಟೀಲ್ ದೇವಿಕೇರಾ, ಕಾಳಪ್ಪ ಕವಾತಿ, ರಾಘವೇಂದ್ರ ಮಾಚಗುಂಡಾಳ, ಬೀರಲಿಂಗಪ್ಪ ಬಾದ್ಯಾಪುರ, ರವಿಚಂದ್ರ ಸಾಹುಕಾರ ಆಲ್ದಾಳ, ನಿಂಗಣ್ಣ ಐಕೂರ, ಕೃಷ್ಣಾ ಬಾದ್ಯಾಪುರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.