ಯಾದಗಿರಿ | ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯ ಪೂರ್ವಭಾವಿ ಸಭೆ

Update: 2024-12-24 11:34 GMT

ಯಾದಗಿರಿ : ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಜ.1ರಂದು ಜಿಲ್ಲಾಡಳಿತದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಶರಣಬಸಪ್ಪಕೋಟೆಪ್ಪಗೊಳ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು, ಅಂದು ಬೆಳಿಗ್ಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು, ವೇದಿಕೆ, ಆಹ್ವಾನ ಪತ್ರಿಕೆ ಸೇರಿದಂತೆ ಇನ್ನಿತರ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಬೇಕು, ಜಿಲ್ಲೆಯ ಅಧಿಕಾರಿಗಳು, ಸಿಬ್ಬಂದಿಗಳು, ಆಯಾ ಸಮಾಜದ ಮುಖಂಡರು, ಸಂಘ ಸಂಸ್ಥೆಗಳವರು ತಪ್ಪದೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅವರು ಸಲಹೆ ನೀಡಿದರು.

ಈ ಸಭೆಯಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ ಮಠಪತಿ, ಬಸವರಾಜ್ ಸೈದಾಪುರ, ಕಾಳಪ್ಪ, ವಿಶ್ವಕರ್ಮ, ಪಾರ್ವತಿ, ಬನ್ನಪ್ಪ ವಿಶ್ವಕರ್ಮ, ರಮೇಶ್ ಶ್ರೀಶೈಲ್, ಮೋನೆಯ ದೇವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News