ಯಾದಗಿರಿ | ಜೆಸ್ಕಾಂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶೋಷಿತರ ಪರ ಒಕ್ಕೂಟ ಪ್ರತಿಭಟನೆ

Update: 2025-04-16 18:34 IST
Photo of Letter of appeal
  • whatsapp icon

ಸುರಪುರ : ಜೆಸ್ಕಾಂ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಆಗ್ರಹಿಸಿದರು.

ನಗರದ ವೇಣುಗೋಪಾಲಸ್ವಾಮಿ ದೇವಸ್ಥಾನದ ಬಳಿಯ ಶಾಸಕ ದಿ.ರಾಜಾ ವೆಂಕಟಪ್ಪ ನಾಯಕ ನಾಮಫಲಕದ ಬಳಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಜೆಸ್ಕಾಂ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ದೊಡ್ಡ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಅನೇಕರು ಗಾಯಗೊಂಡಿದ್ದಾರೆ. ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ, ಶಖಾಪುರ ಗ್ರಾಮದಲ್ಲಿ ಯುವಕನೊಬ್ಬ ವಿದ್ಯುತ್ ಅವಘಡ ದಿಂದ ಗಾಯಗೊಂಡಿದ್ದಾನೆ. ಇವೆಲ್ಲ ಘಟನೆಗಳು ನಡೆಯಲು ಅಧಿಕಾರಿಗಳೆ ಕಾರಣ ಆದ್ದರಿಂದ ತಪ್ಪಿತಸ್ಥರ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದರು.

ಮತ್ತೊಮ್ಮೆ ಯಾವುದೇ ಅವಘಡ ಸಂಭವಿಸದಂತೆ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಜೆಸ್ಕಾಂ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದರು.

ನಂತರ ಜೆಸ್ಕಾಂ ಇಲಾಖೆ ಕಲಬುರ್ಗಿ ವಿಭಾಗೀಯ ವ್ಯವಸ್ಥಾಪಕ ನಿರ್ದೇಶಕರಿಗೆ ಬರೆದ ಮನವಿ ತಹಶೀಲ್ದಾರ್ ಕಚೇರಿ ಸಿರಸ್ತೆದಾರ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ತಾಲೂಕು ಅಧ್ಯಕ್ಷ ನಾಗರಾಜ ದರಬಾರಿ,ಜಿಲ್ಲಾ ರೈತ ಘಟಕದ ಅಧ್ಯಕ್ಷ ಗೋಪಾಲ ಬಾಗಲಕೋಟೆ, ವೆಂಕಟೇಶ, ಪಿಡ್ಡನಾಯಕ ಗುಡ್ಡಕಾಯಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News