ಯಾದಗಿರಿ | ನ್ಯಾಯ ಬೆಲೆ ಅಂಗಡಿ ವಿರುದ್ಧ ಪ್ರತಿಭಟನೆ
ಯಾದಗಿರಿ : ಇಲ್ಲಿನ ಕೆಂಭಾವಿ ಪಟ್ಟಣದಲ್ಲಿ ಅನ್ನಭಾಗ್ಯ ಪಡಿತರ ಅಂಗಡಿ ಮಾಲಕರು ಸರಿಯಾಗಿ ಪಡಿತರ ವಿತರಣೆ ಮಾಡದೆ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿ ಫಲಾನುಭಾವಿಗಳು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.
ಸರಿಯಾದ ನಿಟ್ಟಿನಲ್ಲಿ ನಡೆದುಕೊಳ್ಳುತ್ತಿಲ್ಲ. 30 ದಿನಗಳ ಹಂಚಬೇಕಾದದ್ದನ್ನು ಕೇವಲ ಮೂರು ದಿನಗಳಲ್ಲಿ ಹಂಚಿ ಸರಿಯಾಗಿ ಸಾರ್ವಜನಿಕರಿಗೆ ಅನ್ನಭಾಗ್ಯ ಒದಗಿಸುತ್ತಿಲ್ಲ. ಕೂಡಲೇ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಮಹಿಳೆಯರು ಒತ್ತಾಯಿಸಿದ್ದಾರೆ.
ಸರ್ಕಾರಿ ಆದೇಶದ ಪ್ರಕಾರ ಮಂಗಳವಾರ ಮತ್ತು ಸರ್ಕಾರಿ ರಜಾದಿನ ಹೊರತುಪಡಿಸಿ ಎಲ್ಲಾ ನ್ಯಾಯ ಬೆಲೆ ಅಂಗಡಿಗಳನ್ನು ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆ ರವರೆಗೆ ಮತ್ತು ಸಂಜೆ 4 ರಿಂದ ರಾತ್ರಿ 8 ಗಂಟೆವರೆಗೆ ತೆರೆಯಬೇಕು. ಆದರೆ ತಾಲ್ಲೂಕಿನ ಯಾವುದೇ ನ್ಯಾಯ ಬೆಲೆ ಅಂಗಡಿಗಳು ಸರ್ಕಾರದ ಸಮಯವನ್ನು ಪಾಲನೆ ಮಾಡದೆ ತಿಂಗಳಲ್ಲಿ ನಾಲ್ಕೈದು ದಿನಕ್ಕೆ ಬಾಗಿಲು ಹಾಕುತ್ತಿದ್ದಾರೆ. ಇದರಿಂದ ಪಡಿತರದಾರರು ಹೆಚ್ಚಿನ ಸಾಲಿನಲ್ಲಿ ನಿಲ್ಲಬೇಕಿರುವುದರಿಂದ ಮುಖ್ಯವಾಗಿ ಹಿರಿಯ ನಾಗರಿಕರಿಗೆ, ಅಂಗವಿಕಲರಿಗೆ, ಮಹಿಳೆಯರಿಗೆ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾನಿರತರು ಅಸಮಾಧಾನ ವ್ಯಕ್ತಪಡಿಸಿದರು.