ಯಾದಗಿರಿ | ಜಿಲ್ಲಾಡಳಿತದಿಂದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

Update: 2025-01-01 09:47 GMT

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಜ.1ರ ಬುಧವಾರ ದಂದು ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

ದೇಶದ ಮಾಜಿ ಪ್ರಧಾನಮಂತ್ರಿಗಳಾದ ಡಾ.ಮನಮೋಹನ್ ಸಿಂಗ್ ಅವರ ನಿಧನದಿಂದಾಗಿ ಶೋಕಾಚರಣೆ ಜಾರಿ ಇರುವ ಹಿನ್ನೆಲೆಯಲ್ಲಿ, ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿ, ಸಂಸ್ಮರಣಾ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ., ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಜಕಣಾಚಾರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News