ಯಾದಗಿರಿ | ಹಿರಿಯ ನಾಗರಿಕರ ರಕ್ಷಣೆ, ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ : ನ್ಯಾ.ಮರಿಯಪ್ಪ

ಯಾದಗಿರಿ : ಇಂದಿನ ಕಾಲದಲ್ಲಿ ಹೆಚ್ಚಾಗಿ ನಗರ ಪ್ರದೇಶಗಳಲ್ಲಿ ಒತ್ತಡ ಜೀವನದ ನೆಪವೊಡ್ಡಿ ಪ್ರತಿ ಕುಟುಂಬಗಳಲ್ಲಿಯೂ ಹಿರಿಯ ನಾಗರಿಕರನ್ನು ಕಡೆಗಣಿಸುತ್ತಿರುವುದು ನಿಜಕ್ಕೂ ಶೋಚನಿಯ, ಇಳಿ ವಯಸ್ಸಿನ ವ್ಯಕ್ತಿಗಳಿಗೆ ಮನೆಯಲ್ಲಿನ ವಾತವರಣ ಉತ್ತಮ ಸ್ಥಿತಿಯಲ್ಲಿದ್ದಾಗ ಮಾತ್ರ ನೆಮ್ಮದಿಯ ಬದುಕು ಬದುಕಲು ಸಾಧ್ಯ ಎಂದು ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಗೌರವಾನ್ವಿತ ಮರಿಯಪ್ಪ ಅವರು ಹೇಳಿದರು.
ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಅಂಗವಿಕಲ ಮತ್ತು ಹಿರಿಯ ನಾಗರೀಕರ ಇಲಾಖೆ, ಸೇವಾ ಇಲಾಖೆ ಸಂಯುಕ್ತಾಶ್ರಯದಲ್ಲಿ 2025ರ ಮಾರ್ಚ್ ಇತ್ತೀಚಿನ ನಡೆದ ಹಿಂದಿ ಪ್ರಚಾರ ಸಭೆಯಲ್ಲಿ ಓಂಐದ ಹಿರಿಯ ನಾಗರಿಕರ ಕಾನೂನು ಸೇವೆಗಳ ಯೋಜನೆ 2016ರ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಹಿರಿಯ ನಾಗರಿಕರ ಕಾನೂನು ಸೇವೆಗಳ ಯೋಜನೆ 2016 ಇದು ಒಂದು ರಾಷ್ಟ್ರೀಯ ಯೋಜನೆಯಾಗಿದೆ, ನಮ್ಮ ಸಮಾಜದಲ್ಲಿ ತುಳಿತಕ್ಕೊಳಗಾದ ಜನರಿಗೆ ಕಾನೂನುನಾತ್ಮಕ ಹಕ್ಕುಗಳನ್ನು ಕೊಡಿಸಬಹುದು, ಸಮಾಜದಲ್ಲಿ ಹಿರಿಯ ನಾಗರಿಕರ ರಕ್ಷಣೆ ಮತ್ತು ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ, ಪ್ರಸ್ತುತ ದಿನಗಳಲ್ಲಿ ಪ್ರತಿಯೊಂದು ಮನೆಯಲ್ಲಿಯೂ ಹಿರಿಯ ನಾಗರಿಕರಿಗೆ ಪ್ರೀತಿ, ಸಹಾನುಭೂತಿ ಸಿಗುತ್ತಿಲ್ಲ, ಮನೆಯಲ್ಲಿ ಅಥವಾ ಸಾರ್ವಜನಿಕ ಸ್ಥಳದಲ್ಲಿ ವಯಸ್ಸಾದ ಹಿರಿಯ ನಾಗರಿಕರಿಗೆ ಸಹಾನುಭೂತಿ ಹಾಗೂ ಪ್ರೀತಿ ನೀಡಿದಲ್ಲಿ ನೆಮ್ಮದಿ ಜೀವನ ಮಾಡಲು ದೃಢರಾಗುತ್ತಾರೆ, ಎಲ್ಲಾ ಮನೆಗಳಲ್ಲೂ ಹಲವರು ಒತ್ತಡಗಳಿಂದ ತಂದೆ, ತಾಯಿ, ಅಜ್ಜ, ಅಜ್ಜಿ ಹಾಗೂ ಇತರೆ ಹಿರಿಯರ ಕಡಗಣನೆ ಸಾಮಾನ್ಯವಾಗಿದೆ, ಇದರಿಂದ ಅವರು ಖಿನ್ನತೆಗೊಳಗಾಗಿ ಹಲವಾರು ಸಮಸ್ಯೆಗಳಿಗೀಡಾಗುತ್ತಿದ್ದಾರೆ, ಇವನ್ನು ದೂರ ಮಾಡುವ ಕೆಲಸ ಪ್ರತಿಯೊಬ್ಬರಿಂದ ನಡೆಯಬೇಕಿದೆ ಎಂದು ತಿಳಿಸಿದರು.
ಯಾದಗಿರಿ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ್ ಅವರು ಮಾತನಾಡಿ, ಮನುಷ್ಯನಿಗೆ ದಿನನಿತ್ಯ ಯೋಗ ಮಾಡುವುದರಿಂದ ಆರೋಗ್ಯ ಉತ್ತಮ ಸ್ಥಿತಿಯಲ್ಲಿ ಕಾಪಾಡಿಕೊಳ್ಳಬಹುದು, ಹಿರಿಯ ನಾಗರಿಕರಿಗೆ ಹಲವಾರು ಸೌಲಭ್ಯಗಳನ್ನು ಸರ್ಕಾರ ಜಾರಿ ಮಾಡಿದೆ ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮಕ್ಕೆ ಅಥಿತಿಯಾಗಿ ಆಗಮಿಸಿದ ಯಾದಗಿರಿ ಜಿಲ್ಲಾ ಸರಕಾರಿ ನಿವೃತ್ತ ಅಧಿಕಾರಿ ಸಿ.ಎಮ್ ಪಟ್ಟೆದಾರ ಅವರು ಮಾತನಾಡಿ, ಸರಕಾರ ಹಿರಿಯ ನಾಗರಿಕರಿಗೆ ಅನುಕೂಲವಾಗುವಂತೆ ಪ್ರತ್ಯೇಕ ಕಾನೂನು ರಚಿಸಿದ್ದು, ಈ ಕಾನೂನಿನ ಮುಖಾಂತರ ಹಲವು ಹಕ್ಕುಗಳನ್ನು ಹಿರಿಯ ನಾಗರಿಕರಿಗೆ ನೀಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮತ್ತೋರ್ವ ಅಥಿತಿಯಾಗಿ ಆಗಮಿಸಿದ ಯಾದಗಿರಿ ವೈದ್ಯರು ಡಾ.ಭಗವಂತ ಅನವಾರ ಅವರು ಮಾತನಾಡಿ, ಹಿರಿಯ ನಾಗರಿಕರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿರಬೇಕು ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು, ಇದರ ಜೊತೆಗೆ ಇನ್ನಿತರ ಚಟುವಟಿಕೆಗಳನ್ನು ಅಂದರೆ ಪುಸ್ತಕ ಓದುವುದು, ಸಂಗೀತಾ ಕೇಳುವುದು ಹಾಗೂ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದು ಮಾಡಬೇಕಾಗಿದೆ. ಅಲ್ಲದೇ ನಿರಂತರ ಚಟುವಟಿಕೆಗಳಲ್ಲಿ ಭಾಗಿಯಾಗುವುದರಿಂದ ಮಾನಸಿಕ ಖಿನ್ನತೆ ದೂರ ತಳ್ಳಬಹುದಾಗಿದೆ ಅಲ್ಲದೇ ಆರೋಗ್ಯ ಪೂರ್ಣ ಜೀವನ ಮಾಡಬಹುದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಯಾದಗಿರಿ ಶ್ರೀ ಸಾಯಿ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಶ್ರೀ ಅಜೀತ್ ಜೈನ್, ಹಿರಿಯ ನಾಗರಿಕರು, ವಿಕಲಚೇತನರು, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.