ಯಾದಗಿರಿ | ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಡಿಪಿಓ ವನಜಾಕ್ಷಿ
Update: 2025-04-04 18:23 IST

ವನಜಾಕ್ಷಿ
ಯಾದಗಿರಿ : ಅಂಗನವಾಡಿ ಸಹಾಯಕಿಯ ಗೈರು ಹಾಜರಾತಿ ಸಕ್ರಮಗೊಳಿಸಲು ಒಂದು ಲಕ್ಷ ರೂ. ಗೆ ಬೇಡಿಕೆ ಇಟ್ಟಿದ್ದ ಸಿಡಿಪಿಓ ವನಜಾಕ್ಷಿ ಅವರು ಇಂದು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಗೈರು ಹಾಜರಿ ಸಕ್ರಮಗೊಳಿಸಿ ವೇತನ ಬಿಡುಗಡೆ ಮಾಡಲು ಸಿಡಿಪಿಓ ಅವರು ಒಂದು ಲಕ್ಷ ರೂ. ವರೆಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ನಗರದ ಯಾದಗಿರಿ ಬಸ್ ನಿಲ್ದಾಣದ ಬಳಿ 80 ಸಾವಿರ ರೂ. ಲಂಚ ಪಡೆಯುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.
ಯಾದಗಿರಿ ಲೋಕಾಯುಕ್ತ ಡಿವೈಎಸ್ಪಿ ಜೆ.ಹೆಚ್.ಇನಾಮದಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಪಿಐ ಸಿದ್ದರಾಯ, ಸಂಗಮೇಶ ಹಾಗೂ ಇತರ ಲೋಕಾಯುಕ್ತ ಸಿಬ್ಬಂದಿಗಳು ಈ ಯಶಸ್ಸಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.