ಯಾದಗಿರಿ | ಅರ್ಥಪೂರ್ಣವಾಗಿ ಮಹಾವೀರ ಜಯಂತಿ ಆಚರಣೆಗೆ ನಿರ್ಧಾರ

ಯಾದಗಿರಿ : ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯಲ್ಲಿ ಎ.10ರಂದು ಮಹಾವೀರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರ ಅಧ್ಯಕ್ಷತೆಯಲ್ಲಿ ಇಂದು ಮಹಾವೀರ ಅವರ ಜಯಂತಿ ಆಚರಣೆ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಎ.10 ರ ಬೆಳಿಗ್ಗೆ 11 ಗಂಟೆಗೆ ಮಹಾವೀರ ಅವರ ಜಯಂತಿಯನ್ನು ನಗರದ ಚಕ್ಕರ್ ಕಟ್ಟಾ, ಮಹಾವೀರ ಭವನ ಸಭಾಂಗಣದಲ್ಲಿ ಆಚರಿಸಲು ನಿರ್ಧರಿಸಲಾಗಿದ್ದು, ಅವಶ್ಯಕ ಸಿದ್ಧತೆ ಮಾಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಅಂದು ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಶಿಷ್ಟಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು, ವೇದಿಕೆ, ಆಹ್ವಾನ ಪತ್ರಿಕೆ, ವೇದಿಕೆ ಸಿದ್ದತೆ ಮಾಡಿಕೊಳ್ಳುವಂತೆ ಹಾಗೂ ನುರಿತ ಉಪನ್ಯಾಸಕರನ್ನು ಆಹ್ವಾನಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಮೆರವಣಿಗೆ ಕುರಿತು ಮುಂಚಿತವಾಗಿ ತಿಳಿಸಬೇಕು. ಜಿಲ್ಲಾ, ಗ್ರಾಮ ಪಂಚಾಯತ್, ತಾಲೂಕು ಮಟ್ಟದ ಹಾಗೂ ಶಾಲಾ, ಕಾಲೇಜು, ಕಚೇರಿಯಲ್ಲಿ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕಳೆದ ಎರಡು ವರ್ಷಗಳಲ್ಲಿ ಲೋಕಸಭಾ, ವಿಧಾನ ಸಭಾ ಚುನಾವಣೆ ಗಳ ಹಿನ್ನೆಲೆಯಲ್ಲಿ ಮಹಾನಿಯರ ಜಯಂತಿ ಸರಳವಾಗಿ ಆಚರಿಸಲಾಗಿದೆ. ಈ ಬಾರಿ ಕಾರ್ಯಕ್ರಮವು ಶಿಸ್ತುಬದ್ದವಾಗಿ ನಡೆಯಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಿರಬೇಕು. ಜಯಂತಿಯಂದು ಸೂಕ್ತ ಪೋಲಿಸ್ ಬಂದೋಬಸ್ತ್, ಮಾಡಲು ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಬಾಬು ದೋಖಾ, ಪಾರಸ್ಮಲ್ ಜೈನ್,ಗೌತಮಚಂದ್ ದೋಖಾ ಜೈನ್, ಗೌತಮ್ ಜೈನ್, ಸುರೇಶ್ ಜೈನ್, ಮಹೇಂದ್ರ ಜೈನ್, ಸಮಾಜದ ಮುಖಂಡರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.