ಯಾದಗಿರಿ | ವಿದ್ಯುತ್ ಅವಘಡ ಸಂಭವಿಸಿದ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

Update: 2025-04-09 19:57 IST
ಯಾದಗಿರಿ | ವಿದ್ಯುತ್ ಅವಘಡ ಸಂಭವಿಸಿದ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ
  • whatsapp icon

ಸುರಪುರ : ವಿದ್ಯುತ್ ಅವಘಡದಿಂದ ನಷ್ಟಕ್ಕೊಳಗಾದ ಮನೆಗಳಿಗೆ ಜೆಸ್ಕಾಂ ಇಲಾಖೆಯಿಂದ ಪರಿಹಾರ ಕೊಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ತಿಳಿಸಿದರು.

ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಮಂಗಳವಾರ ಸಂಜೆ ಸಂಭವಿಸಿದ ವಿದ್ಯುತ್ ಅವಘಡ ದಿಂದ ನೂರಕ್ಕೂ ಹೆಚ್ಚು ಮನೆಗಳಲ್ಲಿನ ಅನೇಕ ಎಲೆಕ್ಟ್ರಿಕಲ್ ವಸ್ತುಗಳು ಸುಟ್ಟು ಹಾನಿಯಾಗಿರುವ ಕುಟುಂಬಗಳಿಗೆ ಭೇಟಿ ನೀಡಿ ಮಾತನಾಡಿ, ಈ ರೀತಿ ಅವಘಡ ಸಂಭವಿಸಬಾರದಿತ್ತು, ತಮ್ಮೆಲ್ಲರ ಸುರಕ್ಷತೆಗೆ ಅಗತ್ಯ ಕ್ರಮವನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಲಾಗುವುದು. ಈಗಾಗಲೇ ಗ್ರಾಮದಲ್ಲಿ ವಿದ್ಯುತ್‌ ತಂತಿಗಳು ಜೋತು ಬಿದ್ದಿರುವುದು, ವಿದ್ಯುತ್ ಪರಿವರ್ತಕ ಅಳವಡಿಸುವುದು ಸೇರಿದಂತೆ ಎಲ್ಲಾ ರೀತಿಯ ಕಾರ್ಯವನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ, ನಿಮ್ಮೆಲ್ಲರ ಸುರಕ್ಷತೆಗೆ ಅಗತ್ಯವಾದ ಎಲ್ಲಾ ಕ್ರಮವನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಪ್ರತಿ ಮನೆಗಳಿಗೆ ಭೇಟಿ ನೀಡುವುದರ ಜೊತೆಗೆ ಗಾಯಾಳುಗಳಿಗೆ ಭೇಟಿ ಮಾಡಿ ಸಾಂತ್ವಾನ ಹೇಳಿದ ಯುವ ಮುಖಂಡ ರಾಜಾ ಸಂತೋಷ ನಾಯಕ ಮಾತನಾಡಿ, ಗ್ರಾಮದ ಜನರೊಂದಿಗೆ ನಾವೆಲ್ಲ ಇದ್ದೇವೆ, ಮುಂದೆ ಈ ರೀತಿ ಮತ್ತೊಮ್ಮೆ ಅವಘಡ ಸಂಭವಿಸದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಲು ಈಗಾಗಲೇ ನಮ್ಮ ಅಣ್ಣನವರಾದ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಸೂಚಿಸಿದ್ದಾರೆ. ಅಲ್ಲದೆ ಗ್ರಾಮದಲ್ಲಿನ ವಿದ್ಯುತ್ ಸಮಸ್ಯೆಯನ್ನು ಶಾಸಕರು ಗಂಭೀರವಾಗಿ ತೆಗೆದುಕೊಂಡಿದ್ದು, ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಿದ್ದಾರೆ. ಮತ್ತೊಮ್ಮೆ ಈ ರೀತಿಯ ಸಮಸ್ಯೆ ಉಂಟಾಗದಂತೆ ಮುಂಜಾಗ್ರತೆ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಹಸಿಲ್ದಾರ್ ಹುಸೇನಸಾಬ್ ಎ.ಸರಕಾವಸ್, ತಾ.ಪಂ ಇಒ ಬಸವರಾಜ ಸಜ್ಜನ್, ಪಿ.ಐ ಆನಂದ ವಾಘಮೊಡೆ, ಗ್ರಾ,ಕು.ನೀ. ಸರಬರಾಜು ಇಲಾಖೆ ಎಇಇ ಹಣಮಂತ್ರಾಯ ಪಾಟೀಲ್, ಮುಖಂಡರಾದ ರಮೇಶ ದೊರೆ ಆಲ್ದಾಳ,ಮಹೇಶ ಯಾದವ್ ಸೇರಿದಂತೆ ಜೆಸ್ಕಾಂ ಇಲಾಖೆಯ ವಿಭಾಗಿಯ ಕಚೇರಿ ಅಧಿಕಾರಿಗಳು ಸೇರಿದಂತೆ ಗ್ರಾಮದ ಅನೇಕ ಮುಖಂಡರು ಹಾಗೂ ಜನರು ಭಾಗವಹಿಸಿದ್ದರು.

ಈ ರೀತಿಯ ವಿದ್ಯುತ್‌ ಅವಘಡ ಸಂಭವಿಸದಂತೆ ಮುಂಜಾಗ್ರತೆ ವಹಿಸಬೇಕು ಮತ್ತು ಜೆಸ್ಕಾಂ ಇಲಾಖೆ ಗ್ರಾಮದಲ್ಲಿ ಕೂಡಲೇ ವಿದ್ಯುತ್ ಸಮಸ್ಯೆ ಪರಿಹರಿಸಬೇಕು.

- ಡಾ.ಸುಶೀಲಾ ಬಿ. ಜಿಲ್ಲಾಧಿಕಾರಿ

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News