ಯಾದಗಿರಿ | ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿ ಡಾ.ಭೀಮಣ್ಣ ಮೇಟಿ ನೇಮಕ

ಯಾದಗಿರಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ನೂತನವಾಗಿ ರಾಜ್ಯ ಉಪಾಧ್ಯಕ್ಷರನ್ನಾಗಿ ಯಾದಗಿರಿ ವಿಧಾನಸಭೆ ಕ್ಷೇತ್ರದ ಪ್ರಬಲ ನಾಯಕ ಡಾ.ಭೀಮಣ್ಣ ಮೇಟಿ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಅವರು ಮಾ.15ರಂದು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಇದಲ್ಲದೇ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಉಸ್ತವಾರಿಯನ್ನಾಗಿ ಕೂಡಲೇ ಜವಾಬ್ದಾರಿ ವಹಿಸಿಕೊಂಡು ಜಿಲ್ಲಾ, ಬ್ಲಾಕ್, ಕ್ಷೇತ್ರ ಮತ್ತು ಪ್ರಚಾರ ಸಮಿತಿಗಳ ನೇಮಕ ಮತ್ತು ಕ್ಷೇತ್ರವಾರು ಪ್ರಚಾರ ಸಮಿತಿಗಳ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ಆದೇಶದ ಮೂಲಕ ಸೂಚಿಸಿದ್ದಾರೆ.
ಯಾದಗಿರಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ, ಸಂಯೋಜಕರಾಗಿ ಕೂಡ ಭೀಮಣ್ಣ ಮೇಟಿ ಅವರನು ಪಕ್ಷದ ಜವಾಬ್ದಾರಿ ಹೊತ್ತುಕೊಂಡು ಕೆಲಸ ಮಾಡಿದ್ದಾರೆ. ಸಂಘಟನೆಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಚಾರ ಸಮಿತಿಯ ರಾಜ್ಯ ಉಪಾಧ್ಯಕ್ಷರನ್ನಾಗಿ ಪಕ್ಷ ನೇಮಕ ಮಾಡುವ ಮೂಲಕ ಮಹತ್ತರವಾದ ಜವಾಬ್ದಾರಿ ನೀಡಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೆಪಿಸಿಸಿ ಪ್ರಚಾರ ಸಮಿತಿ ನೂತನ ರಾಜ್ಯ ಉಪಾಧ್ಯಕ್ಷ ಡಾ.ಭೀಮಣ್ಣ ಮೇಟಿ ಅವರು, ಪಕ್ಷ ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಸಂಘಟನೆ ಮಾಡುತ್ತೇನೆ ಎಂದು ಹೇಳಿದರು.
ರಾಜ್ಯ ಸರಕಾರದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡುವ ಮೂಲಕ ಅವರನ್ನು ಪಕ್ಷಕ್ಕೆ ಸೆಳೆಯುವಂತಹ ಕೆಲಸ ಮಾಡುತ್ತೇನೆ. ಇದರಿಂದಾಗಿ ಭದ್ರವಾಗಿ ಪಕ್ಷ ಕಟ್ಟಲು ತುಂಬ ಅನುಕೂಲವಾಗುತ್ತದೆ ಎಂದು ತಿಳಿಸಿದರು.