ಯಾದಗಿರಿ | ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಜಗಜೀವನರಾಮ್‌ ಜಯಂತಿ ಆಚರಣೆ

Update: 2025-04-05 20:00 IST
Photo of Program
  • whatsapp icon

ಯಾದಗಿರಿ : ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಡಾ.ಬಾಬು ಜಗಜೀವನರಾಮ್‌ ಅವರ ಜಯಂತಿ ಆಚರಣೆ ನಡೆಯಿತು.

ಡಾ.ಬಾಬು ಜಗಜೀವನರಾಮ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಮಾತನಾಡಿ, “ಡಾ.ಬಾಬು ಜಗಜೀವನ ರಾಂ ಅವರು ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ಮಹಾನ್‌ ನಾಯಕ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಅಲೆಮಾರಿ, ಅರೆ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ದೇವಿಂದ್ರನಾಥ ನಾದ ಮಾತನಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಮಾಜಿ ಉಪಾಧ್ಯಕ್ಷೆ ನಾಗರತ್ನ ಕುಪ್ಪಿ,ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ, ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ಯುಡ ಮಾಜಿ ಅಧ್ಯಕ್ಷ ಬಸವರಾಜ ಚಂಡ್ರಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರುಶುರಾಮ ಕುರಕುಂದಿ, ವೆಂಕಟರೆಡ್ಡಿ ಅಬ್ಬೆತುಮಕೂರು, ನಗರಸಭೆ ಸದಸ್ಯ ಹಣಮಂತ ಇಟಗಿ ಮತ್ತು ಸ್ವಾಮಿದೇವ ದಾಸನಕೆರಿ, ವಿಜಯಲಕ್ಷ್ಮಿ ನಾಯಕ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ಕಾಡಂನೊರ, ರಮೇಶ್ ದೊಡಮನಿ, ಮಲ್ಲಿಕಾರ್ಜುನ ಕಟ್ಟಿಮನಿ, ಗೋಪಾಲ ದಾಸನಕೆರಿ, ಮೋನೇಶ ಬೆಳಿಗೇರಿ, ಆಂಜನೇಯ ಬಬಲಾದಿ, ಸುನೀತಾ ಚವ್ಹಾಣ, ವೀಣಾ ಮೋದಿ, ಶಕುಂತಲಾ ಜಿ., ಯಲ್ಲಪ್ಪ ಮ್ಯಾಳಿಕೇರಿ, ಭೀಮಬಾಯಿ ಶೆಂಡಿಗಿ, ಸಿದ್ದಲಿಂಗಪ್ಪ ನಾಯಕ, ಶಿವಣ್ಣ ಪಂಚಾಳ, ಶಿವರಾಜ ದಾಸನಕೇರಿ, ಶಿವು ಮುದ್ನಾಳ, ಶ್ರಿಕಾಂತ ಸುಂಗಲ್ಕರ್, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ ಕಡೆಸೂರ, ಮರಿಲಿಂಗ ಜಿನಿಕೇರಿಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News