ಯಾದಗಿರಿ | ಸಚಿವ ಶರಣಬಸಪ್ಪ ದರ್ಶನಾಪೂರ ಜಿಲ್ಲಾ ಪ್ರವಾಸ
Update: 2025-03-29 19:10 IST

ಯಾದಗಿರಿ : ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಮಾ.31 ಹಾಗೂ ಏ.1 ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ತಿಳಿಸಿದ್ದಾರೆ.
2025ರ ಮಾ.31ರ ಸೋಮವಾರ ರಂದು ಬೆಳಿಗ್ಗೆ 9 ಗಂಟೆ ಕಲಬುರಗಿದಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ಶಹಾಪೂರ ಆಗಮಿಸಿ, ಶಹಾಪೂರ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಆಲಿಸುವರು ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 5 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.
2025ರ ಏ.1 ಮಂಗಳವಾರ ರಂದು ಬೆಳಿಗ್ಗೆ 9 ಗಂಟೆ ಕಲಬುರಗಿ ನಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆ ಶಹಾಪೂರ ಆಗಮಿಸಿ, ಸಾರ್ವಜನಿಕ ಕುಂದುಕೊರತೆ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 5 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.