ಯಾದಗಿರಿ | ಜಾಲಿಬೆಂಚಿ ಗ್ರಾಮಕ್ಕೆ ಶಾಸಕ ರಾಜಾ ವೇಣುಗೊಪಾಲ ನಾಯಕ ಭೇಟಿ

Update: 2025-04-15 20:00 IST
ಯಾದಗಿರಿ | ಜಾಲಿಬೆಂಚಿ ಗ್ರಾಮಕ್ಕೆ ಶಾಸಕ ರಾಜಾ ವೇಣುಗೊಪಾಲ ನಾಯಕ ಭೇಟಿ
  • whatsapp icon

ಸುರಪುರ : ಕಳೆದ ಕೆಲ ದಿನಗಳ ಹಿಂದೆ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಸಂಭವಿಸಿದ ವಿದ್ಯುತ್ ಅವಘಡ ಸ್ಥಳಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ ನೀಡಿ ವೀಕ್ಷಿಸಿದರು.

ಇದೇ ಸಂದರ್ಭದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾದ ಮನೆಗಳಿಗೆ ಭೇಟಿ ನೀಡಿ ಕುಟುಂಬಸ್ಥರ ಸಮಸ್ಯೆ ಆಲಿಸಿದರು. ಅಲ್ಲದೆ ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ತಮಗೆ ಉಂಟಾಗಿರುವ ನಷ್ಟಕ್ಕೆ ಪರಿಹಾರವನ್ನು ಕೊಡಿಸುವುದಾಗಿ ಭರವಸೆ ನೀಡಿದರು.

ವಿದ್ಯುತ್ ಅವಘಡಕ್ಕೊಳಗಾದ ಪ್ರತಿ ಮನೆಗೂ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಹುಸೇನಸಾಬ್ ಎ.ಸರಕಾವಸ್ ಜನರಿಗೆ ಆದ ನಷ್ಟದ ಕುರಿತು ಮಾಹಿತಿ ಪಡೆದರು. ಜೆಸ್ಕಾಂ ಇಲಾಖೆ ವಿಭಾಗೀಯ ಅಧಿಕಾರಿ ರಾಜಶೇಖರ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಠ್ಠಲ್ ಯಾದವ್, ಪಿ.ಐ ಆನಂದ ವಾಘಮೊಡೆ ಸೇರಿದಂತೆ ಗ್ರಾಮದ ಅನೇಕ ಮುಖಂಡರು ನೂರಾರು ಜನರು ಉಪಸ್ಥಿತರಿದ್ದರು.

ವಕ್ಫ್ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಮನವಿ :

ಜಾಲಿಬೆಂಚಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರಿಗೆ ಗ್ರಾಮದ ಮಹ್ಮದಿಯ ಮಜೀದ್ ಸಮಿತಿ ಹಾಗೂ ಮುಸ್ಲಿಂ ಬಾಂಧವರು ಮನವಿ ಸಲ್ಲಿಸಿ, ಕೇಂದ್ರ ಸರಕಾರ ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆ ಕೂಡಲೇ ಹಿಂಪಡೆಯುವಂತೆ ಸರಕಾರಕ್ಕೆ ಒತ್ತಾಯಿಸಿದ ಮನವಿ ಸಲ್ಲಿಸಿ, ತಾವು ಈ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಮತ್ತು ರಾಜ್ಯ ಸರಕಾರ ಈ ಕಾಯ್ದೆಯನ್ನು ಜಾರಿಗೊಳಿಸಲು ಮುಂದಾಗದಂತೆ ಮನವಿ ಮಾಡುವಂತೆ ವಿನಂತಿಸಿದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News