ಯಾದಗಿರಿ | ಮಹಾತ್ಮಗಾಂಧಿ ನರೇಗಾ ಯೋಜನೆಯ ಕೂಲಿ ದರ ಹೆಚ್ಚಳಕ್ಕೆ ಸೂಚನೆ : ಲವೀಶ್ ಒರಡಿಯಾ

Update: 2025-03-29 17:30 IST
Photo of Lavish Oradia

ಲವೀಶ್ ಒರಡಿಯಾ

  • whatsapp icon

ಯಾದಗಿರಿ : ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅಕುಶಲ ಕೂಲಿ ಕೆಲಸ ಮಾಡುವ ಗ್ರಾಮೀಣ ಕೂಲಿಕಾರರ ದಿನದ ಕೂಲಿ ದರವನ್ನು 370 ರೂ. ಗಳಿಗೆ ಹೆಚ್ಚಳ ಮಾಡಿ, ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯವು ಆದೇಶ ಹೊರಡಿಸಿದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಅವರು ತಿಳಿಸಿದ್ದಾರೆ.

ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ದಿನದ ಕೂಲಿ ದರ 349 ರೂ. ಗಳಿದ್ದು, 2025ನೇ ಸಾಲಿನ ಏಪ್ರಿಲ್‌ ನಿಂದ 370 ರೂ.ಗಳ ದಿನದ ಕೂಲಿದರ ನಿಗದಿಪಡಿಸಿದೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿ ಅರ್ಹ ಕುಟುಂಬಕ್ಕೂ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಅಕುಶಲ ಕೂಲಿ ಕೆಲಸ ಕೊಡಲಾಗುತ್ತದೆ. ಒಂದು ಕುಟುಂಬ ವರ್ಷದಲ್ಲಿ ನೂರು ದಿನ ಕೆಲಸ ಮಾಡಿದರೆ 37 ಸಾವಿರ ರೂ.ಗಳ ಕೂಲಿ ಹಣ ಪಡೆದುಕೊಳ್ಳಬಹುದು. ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಗಂಡು ಹೆಣ್ಣಿಗೂ 370 ರೂ.ಗಳ ಸಮಾನ ಕೂಲಿ ಇದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News