ಯಾದಗಿರಿ | ಡಾ.ಬಾಬು ಜಗಜೀವನ್ ರಾಮ್ ಜಯಂತಿಯ ಪೂರ್ವಭಾವಿ ಸಭೆ

Update: 2025-03-21 20:19 IST
Photo of Metting
  • whatsapp icon

ಸುರಪುರ : ನಗರದ ತಹಶೀಲ್ದಾರ್ ಕಚೇರಿಯಲ್ಲಿ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ ಜಯಂತಿ ಆಚರಣೆ ಅಂಗವಾಗಿ ಪೂರ್ವಭಾವಿ ಸಭೆ ನಡೆಸಲಾಗಿದೆ.

ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಹುಸೇನ್ ಸಾಬ್ ಮಾತನಾಡಿ, ಏ.5 ರಂದು ಡಾ.ಬಾಬು ಜಗಜೀವನ್ ರಾಮ್ ಅವರ ಜಯಂತಿ ಕಾರ್ಯಕ್ರಮವನ್ನು ತಾಲೂಕು ಆಡಳಿತದಿಂದ ಆಚರಿಸಲಾಗುತ್ತಿದ್ದು, ಬೆಳಗ್ಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿ ವರೆಗೆ ಡಾ.ಬಾಬು ಜಗಜೀವನ ರಾಮ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ, ನಂತರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಎಲ್ಲ ಇಲಾಖೆಯ ಅಧಿಕಾರಿಗಳು ಡಾ.ಬಾಬು ಜಗಜೀವನ್ ರಾಮ್ ಅವರ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಿಳಿಸಿದರು.

ತಾಲೂಕಿನ ಎಲ್ಲಾ ಕಚೇರಿ ಶಾಲಾ ಕಾಲೇಜುಗಳಲ್ಲಿ ಬೆಳಗ್ಗೆ ಕಡ್ಡಾಯವಾಗಿ ಜಯಂತಿ ಆಚರಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಯಲ್ಲಪ್ಪ ಹುಲಿಕಲ್, ಹಣಮಂತ ಕಟ್ಟಿಮನಿ ಬೊಮ್ಮನಹಳ್ಳಿ, ಮಲ್ಲಿಕಾರ್ಜುನ ಮಂದಾಲೆ, ಮಹೇಂದ್ರ ಕುಮಾರ್ ಬಿಲ್ಲವ್, ಭೀಮಪ್ಪ ಕಂಡ್ರೆ, ಚಂದ್ರಶೇಖರ ಕವಡಿಮಟ್ಟಿ, ಬಸವರಾಜ ಹಾದಿಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಾದ ಡಾ. ಆರ್.ವಿ ನಾಯಕ, ಎಸ್. ಜಿ ಪಾಟೀಲ್, ಹಣಮಂತರಾಯ ಪಾಟಿಲ್, ಸಣಕೆಪ್ಪ ಕೊಂಡಿಕಾರ್, ಮಹಮ್ಮದ್ ಸಲೀಂ, ಎಸ್.ಬಿ ಬಿರಾದರ್, ಹನುಮಂತ ಯಾದವ್, ಡಾ. ಸುರೇಶ್ ಹಚ್ಚಡ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News