ಯಾದಗಿರಿ | ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆ

Update: 2025-04-07 18:41 IST
ಯಾದಗಿರಿ | ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆ
  • whatsapp icon

ಸುರಪುರ : ಎ.14 ರಂದು ತಾಲೂಕು ಆಡಳಿತದಿಂದ ಆಚರಿಸುವ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ತಹಶೀಲ್ದಾರ್ ಹುಸೇನಸಾಬ್ ಎ.ಸರಕಾವಸ್ ತಿಳಿಸಿದರು.

ನಗರದ ತಹಶೀಲ್ದಾರ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಸಭೆಯಲ್ಲಿ ಭಾಗವಹಿಸಿರುವ ಅನೇಕ ಮುಖಂಡರು ನೀಡಿರುವ ಸಲಹೆಯಂತೆ ಅಂದು ಬೆಳಿಗ್ಗೆ ಬಸ್ ನಿಲ್ದಾಣದ ಬಳಿಯ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದ ಬಳಿಯಿಂದ ಪ್ರಮುಖ ಬೀದಿಗಳ ಮೂಲಕ ತಹಶೀಲ್ದಾರ್ ಕಚೇರಿವರೆಗೆ ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. ತಹಶೀಲ್ದಾರ್ ಕಚೇರಿ ಆವರಣದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಶಾಸಕರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನವನ್ನು ಮಾಡಲಾಗುವುದು.ಎಲ್ಲರ ಅಭಿಪ್ರಾಯದಂತೆ ಕಾರ್ಯಕ್ರಮದ ವೇದಿಕೆಯಲ್ಲಿ ಧರ್ಮಗುರುಗಳು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

ಅಲ್ಲದೆ ತಾಲೂಕಿನಾದ್ಯಂತ ಎಲ್ಲಾ ಕಚೇರಿಗಳಲ್ಲಿ,ಗ್ರಾಮ ಪಂಚಾಯತ್‌, ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಣೆ ಮಾಡಬೇಕು ಹಾಗೂ ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿಗಳು ಭಾಗವಹಿಸಬೇಕು, ಕಾರ್ಯಕ್ರಮದಲ್ಲಿ ಗೈರಾಗುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಕುರಿತು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ ನಾಯಕ, ತಾ.ಪಂ ಇಓ ಬಸವರಾಜ ಸಜ್ಜನ್, ಸಮಾಜ ಕಲ್ಯಾಣಾಧಿಕಾರಿ ಮಹ್ಮದ್ ಸಲೀಂ, ಪತ್ರಾಂಕಿತ ಖಾಜಾನೆ ಅಧಿಕಾರಿ ಸಣಕೆಪ್ಪ ಕೊಂಡಿಕಾರ್ ಹಾಗೂ ವಿವಿಧ ಸಂಘಟನೆಗಳ ಮುಖಂಡರಾದ, ರಮೇಶ ದೊರೆ ಆಲ್ದಾಳ, ಮಾನಪ್ಪ ಕಟ್ಟಿಮನಿ, ನಾಗಣ್ಣ ಕಲ್ಲದೇವನಹಳ್ಳಿ, ಯಲ್ಲಪ್ಪ ಹುಲಿಕಲ್, ಮಾಳಪ್ಪ ಕಿರದಳ್ಳಿ, ರಾಹುಲ್ ಹುಲಿಮನಿ, ಹಣಮಂತ ಕಟ್ಟಿಮನಿ ಬೊಮ್ಮನಹಳ್ಳಿ, ಮೂರ್ತಿ ಬೊಮ್ಮನಹಳ್ಳಿ, ಶಿವಮೋನಯ್ಯ ಎಲ್.ಡಿ ನಾಯಕ, ಚನ್ನಬಸಪ್ಪ ದೇವಾಪುರ, ಶಿವಲಿಂಗ ಹಸನಾಪುರ, ನಿಂಗಣ್ಣ ಗೋನಾಲ, ಶಿವಶಂಕರ ಬೊಮ್ಮನಹಳ್ಳಿ, ರಾಜು ಕಟ್ಟಿಮನಿ, ಬಸವರಾಜ ದೊಡ್ಮನಿ, ತಿಪ್ಪಣ್ಣ ಶೆಳ್ಳಗಿ, ವೆಂಕಟೇಶ ದೇವಾಪುರ, ವೈಜನಾಥ ಹೊಸ್ಮನಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News