ಯಾದಗಿರಿ | ರುಚಿಯಾದ ಅಡುಗೆ ತಯಾರಿಸಿ ಆರೋಗ್ಯ ಕಾಪಾಡಿ : ಬಿಸಿಎಮ್ ಅಧಿಕಾರಿ ತಿಪ್ಪಾರೆಡ್ಡಿ

ಸುರಪುರ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದ ಸಿಬ್ಬಂದಿಗಳಿಗೆ ನಗರದ ಡಿ.ದೇವರಾಜ್ ಅರಸು ಭವನದಲ್ಲಿ ಆರೋಗ್ಯ ಶಿಕ್ಷಣ ಮತ್ತು ಅಡುಗೆ ತಯಾರಿಸುವ ಕೌಶಲ್ಯಗಳ ಬಗ್ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಉದ್ಘಾಟಕರಾಗಿ ಆಗಮಿಸಿದ್ದ ಚನ್ನಪ್ಪ ಗೌಡ ಚೌದ್ರಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ಶಹಪುರ ರವರು ಮಾತನಾಡಿ, ಆರೋಗ್ಯ ಕಾಪಾಡಿಕೊಳ್ಳಲು ಮತ್ತು ವೃತ್ತಿ ಕೌಶಲ್ಯ ಬೆಳೆಸಿಕೊಳ್ಳಲು ಸದರಿ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಆರೋಗ್ಯ ಶಿಕ್ಷಣಾಧಿಕಾರಿ ಮಲ್ಲಪ್ಪ ಮಾತನಾಡಿ, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಂಡು ಸ್ವಚ್ಛತೆ ಮತ್ತು ಸಾಮಾಜಿಕ ಸ್ವಚ್ಛತೆ ಕಾಪಾಡುವ ಬಗ್ಗೆ ತಿಳಿಸಿದರು.
ಅಧ್ಯಕ್ಷತೆ ವಹಿಸಿಕೊಂಡಿದ್ದ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ತಿಪ್ಪಾರೆಡ್ಡಿ ಮಾಲಿ ಪಾಟೀಲ್ ಮಾತನಾಡಿ, ವಿವಿಧ ಬಗೆಯ ಶುಚಿಯಾದ, ರುಚಿಯಾದ ಸಾಂಬಾರ ತಯಾರಿಸುವ ಕೌಶ್ಯಲ್ಯವನ್ನು, ಕಲೆಯನ್ನು ಪ್ರಾಯೋಗಿಕವಾಗಿ ಕರಗತ ಮಾಡಿಕೊಂಡು ವಸತಿ ನಿಲಯದ ವಿದ್ಯಾರ್ಥಿಗಳಿಗೆ ರುಚಿ ರುಚಿಯಾದ ಅಡುಗೆ ತಯಾರಿಸಿ ಆರೋಗ್ಯ ಮತ್ತು ಶಿಸ್ತನ್ನು ಕಾಪಾಡಲು ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಶಿವಮೊಗ್ಗ ಜಿಲ್ಲೆಯಿಂದ ಆಗಮಿಸಿದ್ದ ಮಂಜುನಾಥ್, ಮುಖ್ಯ ಅಡಿಗೆಯವರು ವಿವಿಧ ಬಗೆಯ ಸಾಂಬಾರ್ ಮತ್ತು ಖಾದ್ಯಗಳನ್ನು ತಯಾರಿಸುವುದನ್ನು ಪ್ರಾಯೋಗಿಕವಾಗಿ ತರಬೇತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಜಯಪ್ಪ ವಿಶ್ರಾಂತ ನಿಲಯ ಮೇಲ್ವಿಚಾರಕರು ಶಿವಮೊಗ್ಗ, ಶಾಂತಾಬಾಯಿ, ನಾಗಪ್ಪ ಕೊಡೆಕಲ್, ಮಹಾದೇವಿ ವೇದಿಕೆ ಮೇಲಿದ್ದರು.ಇಲಾಖೆಯ ನಿಲಯ ಮೇಲ್ವಿಚಾರಕರು, ಅಡುಗೆ ಸಹಾಯಕರು ಭಾಗವಹಿಸಿದ್ದರು