ಯಾದಗಿರಿ: ಜಿಲ್ಲಾ ಕರವೇ ಕಾರ್ಯಾಲಯದಲ್ಲಿ ರಾಷ್ಟ್ರ ಕವಿ ಕುವೆಂಪು ಅವರ 120ನೇ ಜಯಂತಿ ಆಚರಣೆ

Update: 2024-12-29 08:59 GMT

ಯಾದಗಿರಿ: ಡಿ.29- ವಿಶ್ವ ಮಾನವ ಸಂದೇಶ ಸಾರಿದ ಕನ್ನಡದ ಪ್ರಥಮ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ಕುವೆಂಪು ಅವರ ಸಾಹಿತ್ಯಕ್ಕೆ ಕೊಡುಗೆ ಅಪಾರ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾದ್ಯಕ್ಷ ಟಿ.ಎನ್. ಭೀಮ ನಾಯಕ ಅಭಿಪ್ರಾಯಪಟ್ಟರು.

ನಗರದ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಮಾತನಾಡಿದ ಭೀಮ ನಾಯಕ ಅವರು, ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶ ಅತ್ಯಂತ ಮೌಲಿಕವಾಗಿದೆ.ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ಪ್ರಾಂಶುಪಾಲರೂ ಆಗಿದ್ದರು. ನಂತರ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು ಎಂದರು.

ಕುವೆಂಪು ಅವರು ಆಂಗ್ಲ ಭಾಷಾ ಪ್ರಾಧ್ಯಾಪಕರಾಗಿದ್ದರೂ ಕನ್ನಡದ ಮೇಲೆ ವಿಶೇಷ ಒಲವು ಹೊಂದಿ ಕನ್ನಡದ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡಿದರು ಎಂದು ಸ್ಮರಿಸಿಕೊಂಡರು.

ಈ ಸಂದರ್ಭದಲ್ಲಿ ಕರವೇ ವಿಜಯಕುಮಾರ ರಾಠೋಡ, ಸಾಬುನಾಯಕ ನೀಲಹಳ್ಳಿ, ಬಸವರಾಜ ಕಡ್ಡಿ, ಮಹೇಶ ಠಾಣಗುಂದಿ, ಅನೀಲ ದಾಸನಕೇರಿ, ಲಕ್ಕನ್ ರಾಠೋಡ, ಸಂತೋಷ ರಾಠೋಡ, ನಾಗು ಭಂಡಾರಿ, ರಮೇಶ.ಡಿ.ನಾಯಕ, ಇರ್ಫಾನ್ ಪಟೇಲ್, ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News