ಯಾದಗಿರಿ | ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಶೋಷಿತರ ಪರ ಒಕ್ಕೂಟ ಮನವಿ
Update: 2025-03-23 19:44 IST

ಸುರಪುರ : ಶಿಕ್ಷಣ ಇಲಾಖೆಯು ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ನಗರದ ನಾಲ್ವಡಿ ರಾಜ ವೆಂಕಟಪ್ಪ ನಾಯಕ ವೃತ್ತದಲ್ಲಿ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಶಿಕ್ಷಕರ ವರ್ಗಾವಣೆಯ ಬಗ್ಗೆ ಸರ್ಕಾರ ಸರಿಯಾಗಿ ಕ್ರಮ ತೆಗೆದುಕೊಂಡಿಲ್ಲ. ಅಲ್ಲದೇ ಅಧಿಕಾರಿಗಳಿಂದ ಶಿಕ್ಷಕರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿದರು.
ಶಿಕ್ಷಣ ಸಚಿವರಿಗೆ ಬರೆದ ಮನವಿ ಬಿ ಆರ್ ಸಿ ಚೆನ್ನಪ್ಪ ಕ್ಯಾದಗಿ ಅವರ ಮೂಲಕ ಸಲ್ಲಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ತಾಲೂಕು ಅಧ್ಯಕ್ಷ ನಾಗರಾಜ ದರ್ಬಾರಿ, ಶಿವು ಹಸನಾಪುರ, ದೇವಪ್ಪ ರತ್ತಾಳ, ಅಂಬರೀಶ, ಮಲ್ಲು ಕಕ್ಕೇರಾ, ನಾಗರಾಜ, ಹಣಮಂತರಾಯ ಸರಿದಂತೆ ಅನೇಕರು ಭಾಗವಹಿಸಿದ್ದರು.