ಯಾದಗಿರಿ | ವಿದ್ಯುತ್ ತಗುಲಿ ಯುವಕ ಮೃತ್ಯು
Update: 2025-04-15 15:02 IST

ಯಾದಗಿರಿ : ತುಂಡರಿಸಿ ಬಿದ್ದ ವಿದ್ಯುತ್ ಹೈಟೆನ್ಷನ್ ವಯರ್ ತಗುಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಯಾದಗಿರಿಯ ಮಾತಾಮಣಿಕೇಶ್ವರ ನಗರದಲ್ಲಿ ನಡೆದಿದೆ.
ಮೃತರನ್ನು ವಡಗೇರಾ ತಾಲೂಕಿನ ಬಬಲಾದ ಗ್ರಾಮದ ನಿವಾಸಿ ಕಾಜಾ ಪಟೇಲ್ (23) ಎಂದು ಗುರುತಿಸಲಾಗಿದೆ.
ಮೃತನು ಯಾದಗಿರಿಯ ಮಾತಾಮಣಿಕೇಶ್ವರ ನಗರದಲ್ಲಿರುವ ತನ್ನ ಸಹೋದರಿ ಮನೆಗೆ ಬಂದು ವಾಪಸು ಹೋಗುತ್ತಿರುವ ವೇಳೆ ತುಂಡರಿಸಿ ಬಿದ್ದಿದ್ದ ಹೈಟೆನ್ಷನ್ ವಯರ್ ತಗುಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.