ಯಾದಗಿರಿ | ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ ಆರೋಪ : ತನಿಖೆಗೆ ಜಿಲ್ಲಾಧಿಕಾರಿಗೆ ಮನವಿ

ಸುರಪುರ : ವಿಧಾನಸಭಾ ಕ್ಷೇತ್ರದಲ್ಲಿನ ಎರಡೂ ತಾಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ ನಡೆಸಲಾಗಿದ್ದು ತನಿಖೆ ಮಾಡಿಸುವಂತೆ ಆಗ್ರಹಿಸಿ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ಮುಖಂಡರು ನಗರದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಉದ್ಯೋಗ ಖಾತ್ರಿ ಜಾಬ್‌ಕಾರ್ಡ್ ಗಳನ್ನು ನಕಲಿ ಮಾಡಲಾಗಿದೆ, ಅನೇಕ ಕಡೆಗಳಲ್ಲಿ ಉದ್ಯೋಗ ಖಾತ್ರಿ ಕಾಮಗಾರಿ ಮಾಡದೆ ಹಣ ಲೂಟಿ ಮಾಡಲಾಗಿದೆ. ಇದನ್ನು ಸರಿಯಾದ ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಜಿಲ್ಲಾ ಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಅವರು ನಿಮ್ಮ ಮನವಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ತಹಶೀಲ್ದಾರ್ ಹುಸೇನಸಾಬ್ ಎ.ಸರಕಾವಸ್, ಒಕ್ಕೂಟದ ಮುಖಂಡರಾದ ತಾ.ಅಧ್ಯಕ್ಷ ನಾಗರಾಜ ದರಬಾರಿ, ರೈತ ಘಟಕದ ಜಿಲ್ಲಾಧ್ಯಕ್ಷ ಗೋಪಾಲ ಬಾಗಲಕೋಟೆ, ಪಿಡ್ಡ ನಾಯಕ, ಬಸವರಾಜ,ವೆಂಕಟೇಶ ,ದೇವಪ್ಪ ಸೇರಿದಂತೆ ಅನೇಕರು ಭಾಗವಹಿಸಿದ್ದರು.