ಯಾದಗಿರಿ | ಅಗ್ನಿಶಾಮಕ ಸೇವಾ ಸಪ್ತಾಹದ ಅರಿವು, ಅಣಕು ಪ್ರದರ್ಶನ

ಯಾದಗಿರಿ : ಆಕಸ್ಮಿಕವಾಗಿ ಆಸ್ಪತ್ರೆಯಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಬೆಂಕಿ ಅವಘಡ ಸಂಭವಿಸಿದಾಗ ಆಗುವ ದುರ್ಘಟನೆ ಹಾಗೂ ಅಪಾಯ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳ ಬಗ್ಗೆ ಅರಿವು ಹಾಗೂ ಅಣಕು ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಎಂದು ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಮಹೇಶ ಬಿರದಾರ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಆಸ್ಪತ್ರೆ (ಯಿಮ್ಸ), ಜಿಲ್ಲಾ ಮಲೇರಿಯಾ ಅಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಯಾದಗಿರಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ʼಅಗ್ನಿಶಾಮಕ ಸೇವಾ ಸಪ್ತಾಹದ ಅರಿವು ಅಣಕು ಪ್ರದರ್ಶನʼ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅಗ್ನಿ ಸುರಕ್ಷತಾ ಕ್ರಮಗಳನ್ನು ಎಲ್ಲರೂ ಅಳವಡಿಸಿಕೊಂಡು ಅಮೂಲ್ಯವಾದ ಜೀವವನ್ನು, ಸಸ್ಯ ಸಂಪತ್ತನ್ನು ಬೆಂಕಿಯಿಂದ ರಕ್ಷಿಸಿಕೊಳ್ಳಬೇಕು ಹಾಗೂ ಅಗ್ನಿ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಆಕಸ್ಮಿಕವಾಗಿ ಆಸ್ಪತ್ರೆಯಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಬೆಂಕಿ ಅವಘಡ ಸಂಭವಿಸಿದಾಗ ಆಗುವ ದುರ್ಘಟನೆ ಹಾಗೂ ಅಪಾಯ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳ ಬಗ್ಗೆ ತಿಳಿಸಿದರು.
ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿಗಳಾದ ಡಾ.ಸಾಜೀದ್, ಅಗ್ನಿಶಾಮಕ ಇಲಾಖೆಯ ಅಧಿಕಾರಿ ವಿರೇಶ್ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ವೈದ್ಯಕೀಯ ಅಧೀಕ್ಷಕಾರಾದ ಡಾ.ಸಂತೋಶ್, ಜಿಲ್ಲಾ ವಿಬಿಡಿ ಸಲಹೆಗಾರರಾದ ಬಸವರಾಜ್ ಕಾಂತ, ಹಿರಿಯ ಆರೋಗ್ಯ ನಿರಕ್ಷಾಣಾದಿಕಾರಿಗಳಾದ ಹಿರಾಲಾಲ್ ಚೌವ್ಹಾಣ, ಆರೋಗ್ಯ ನಿರಕ್ಷಣಾಧಿಕಾರಿಗಳಾದ ಖುರ್ಶೀದ್, ಉಮೇಶ್, ಶ್ರೀ ಕಾಳಪ್ಪ ಪತ್ತಾರ, ಸಂತೋಶ್ ಜಾದವ್, ಎಮ್‌ಟಿಎಸ್‌ಗಳಾದ ವಿ.ಎಮ್.ಪಾಟಿಲ್, ಖಲಿಮುದ್ದಿನ್, ಹಾಗೂ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು, ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಇನ್ನಿತರರು ಉಪಸ್ಥಿತರಿದ್ದರು.
ಜಿಲ್ಲಾ ಆರೊಗ್ಯ ಶಿಕ್ಷಣಾಧಿಕಾರಿಗಳಾದ ತುಳಸಿರಾಮ ಚವ್ಹಾಣ ಸ್ವಾಗತ ಹಾಗೂ ವಂದನಾರ್ಪಣೆ ವಂದಿಸಿದರು.