ಯಾದಗಿರಿ | ಅರ್ಹ ಫಲಾನುಭವಿಗಳು ಪಂಚಗ್ಯಾರಂಟಿ ಯೋಜನೆಯಿಂದ ವಂಚಿತರಾಗದಂತೆ ನಿಗಾವಹಿಸಿ : ಶರಣಿಕ್ ಕುಮಾರ್ ದೋಕಾ

ಯಾದಗಿರಿ : ರಾಜ್ಯ ಸರ್ಕಾರವು ರಾಜ್ಯದ ಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸದೃಢಗೊಳಿಸಲು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳಲು ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶರಣಿಕ್ ಕುಮಾರ್ ದೋಕಾ ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ಮಹತ್ವದ ಈ ಯೋಜನೆಯಡಿ ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗದಂತೆ ನಿಗಾವಹಿಸಿ, ಶೇ.ನೂರರಷ್ಟು ಪ್ರಗತಿ ಸಾಧಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಪಂಚಗ್ಯಾರಂಟಿ ಯೋಜನೆಗಳಡಿ ತಾಲೂಕು ಮಟ್ಟದ ಸಭೆಗಳಿಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಸಮಿತಿಗಳನ್ನು ಪುನರ್ ರಚಿಸಿದ ನಂತರ ಸಭೆಗಳಿಗೆ ಅವಕಾಶ ದೊರೆಯಲಿದೆ. ಪಂಚ ಗ್ಯಾರಂಟಿ ಯೋಜನೆಗಳಡಿ ಸೂಕ್ತ ಪ್ರಗತಿ ಸಾಧಿಸುವಂತೆ ಅಧಿಕಾರಿಗಳಿಗೂ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಿತಿ ಉಪಾಧ್ಯಕ್ಷರಾದ ಹಣಮಂತ ಕಾಣಳ್ಳಿ,ರಮೇಶ್ ದೊರಿ, ಬಸವರಾಜ ಬಿಳಾರ್, ಹಳ್ಳಪ್ಪ ಹವಾಲ್ದಾರ್ ನಾಗನೂರ, ಸ್ಯಾಮ್ಸನ್ ಮಾಳಿಕೇರಿ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು.