ಯಾದಗಿರಿ | ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯ ಪೂರ್ವಭಾವಿ ಸಭೆ

ಸುರಪುರ : ಎ.30 ರಂದು ಬೆಳಿಗ್ಗೆ ನಡೆಯುವ ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ತಹಶೀಲ್ದಾರ್ ಹುಸೇನಸಾಬ್ ಎ.ಸರಕಾವಸ್ ತಿಳಿಸಿದರು.
ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಲ್ಲಿ, ಸರಕಾರಿ ಕಚೇರಿಗಳು ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಕಡ್ಡಾಯವಾಗಿ ಆಚರಣೆ ಮಾಡಬೇಕು. ತಾಲೂಕು ಆಡಳಿತದಿಂದ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಅನುಷ್ಠಾನಾಧಿಕಾರಿಗಳು ಭಾಗವಹಿಸುವಂತೆ ತಿಳಿಸಿದರು.
ಅಲ್ಲದೆ ಇದೇ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬಸವಣ್ಣನವರ ಕುರಿತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಲಬುರ್ಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ.ಸುರೇಶ ಸಜ್ಜನ್ ಮಾತನಾಡಿ, ಬಸವ ಜಯಂತಿ ದಿನದಂದು ತಾಲೂಕು ಆಡಳಿತದ ಕಾರ್ಯಕ್ರಮ ಆರಂಭಕ್ಕೂ ಮುನ್ನ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪ ಬಳಿಯಲ್ಲಿನ ಬಸವೇಶ್ವರರ ಮೂರ್ತಿಗೆ ಮಾಲಾರ್ಪಣೆ ಮಾಡಿ, ನಂತರ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಕಾರ್ಯಕ್ರಮ ಆರಂಭಿಸುವಂತೆ ಮನವಿ ಮಾಡಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್ ಉಪಸ್ಥಿತರಿದ್ದರು.
ಸಭೆಯಲ್ಲಿ ನಯೋಪ್ರಾ ಮಾಜಿ ಅಧ್ಯಕ್ಷ ಸೂಗುರೇಶ ವಾರದ್, ಬಸವೇಶ್ವರ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ವಿರೇಶ ನಿಷ್ಠಿ ದೇಶಮುಖ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಅಧ್ಯಕ್ಷ ಸೂಗು ಸಜ್ಜನ್, ಕರವೇ ಕಲ್ಯಾಣ ಕರ್ನಾಟಕ ಅಧ್ಯಕ್ಷ ಶಿವಮೋನಯ್ಯ ಎಲ್. ಡಿ.ನಾಯಕ, ಸಗರನಾಡು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ, ಜಗದೀಶ ಪಾಟೀಲ್, ಸಿದ್ದನಗೌಡ ಹೆಬ್ಬಾಳ, ರವಿಕುಮಾರ ಹೆಮನೂರ, ಶರಣಬಸವ ಹೂಗಾರ, ಪ್ರಕಾಶ ಬಣಗಾರ, ಸಿಡಿಪಿಓ ಅನಿಲಕುಮಾರ ಕಾಂಬ್ಳೆ, ಉಪ ಖಜಾನೆ ಅಧಿಕಾರಿ ಸಣಕೆಪ್ಪ ಕೊಂಡಿಕಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿ ಅನೇಕರು ಭಾಗವಹಿಸಿದ್ದರು.