ಯುವಕರು ಸ್ವಾಮಿ ವಿವೇಕಾನಂದರ ಆದರ್ಶ ತತ್ವಗಳನ್ನು ಜೀವನದಲ್ಲಿ ಆಳವಡಿಕೊಳ್ಳಬೇಕು : ಟಿ.ಎನ್.ಭೀಮುನಾಯಕ

Update: 2025-01-12 12:54 GMT

ಯಾದಗಿರಿ : ಏಳಿ ಎದ್ದೇಳಿ, ಗುರಿ ಮುಟ್ಟುವತನಕ ನಿಲ್ಲದಿರಿ, ಎಂದು ಲೋಕಕ್ಕೆ ಸಾರಿದ ಸ್ವಾಮಿ ವಿವೇಕಾನಂದರು ಜೀವಿಸಿದ ಅತ್ಯಲ್ಪಅವಧಿಯಲ್ಲಿನ ಅವರ ಬದುಕು ಜಗತ್ತಿನ ಯುವ ಸಮುದಾಯಕ್ಕೆ ದಾರಿದೀಪವಾಗಿದ್ದಾರೆ ಎಂದು ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಹೇಳಿದರು.

ನಗರದ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರವರ 162ನೇ ಜಯಂತಿಯ ನಿಮಿತ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ವಜ್ಞಾನಿಗಳಲ್ಲಿ ಒಬ್ಬರಾದ ಸ್ವಾಮಿ ವಿವೇಕಾನಂದರು ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆ ಬಗ್ಗೆ ವಿಶಾಲ ದೃಷ್ಟಿಯ ಸಂಕೇತವಾಗಿವಾಗಿದ್ದರು ಯುವಕರು ಸ್ವಾಮಿ ವಿವೇಕಾನಂದರು ಆದರ್ಶ ತತ್ವಗಳನ್ನು ಜೀವನದಲ್ಲಿ ಆಳವಡಿಕೊಳ್ಳಬೇಕೆಂದು ಹೇಳಿದರು.

ಈ ಸಂಧರ್ಭದಲ್ಲಿ ವಿದ್ಯಾರ್ಥಿ ಘಟಕ ಜಿಲ್ಲಾದ್ಯಕ್ಷರಾದ ವಿಶ್ವರಾಜ ಪಾಟೀಲ್ ಹೊನಗೇರಾ, ಯುವ ಘಟಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಲಿಂಗರೆಡ್ಡಿ ಮುನಗಲ್, ರವಿ ಬಾಚವಾರ ರಮೇಶ ಡಿ ನಾಯಕ, ಯಲ್ಲಾಲಿಂಗ ಚಾಮನಳ್ಳಿ ಇತರರು ಭಾಗಿಯಾಗಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News