ಜಿಪಂ-ತಾಪಂ ಚುನಾವಣೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ
ಬೆಂಗಳೂರು, ಫೆ. 6: ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ದೃಷ್ಟಿಯಿಂದ ಪರವಾನಿಗೆ ಪಡೆದು ಶಸ್ತ್ರಾಸ್ತ್ರ ಹೊಂದಿರುವವರು ತಮ್ಮ ಶಸ್ತ್ರಾಸ್ತ್ರಗಳನ್ನು ತಮ್ಮ ಸಮೀಪದ ಪೊಲೀಸ್ ಠಾಣೆಗೆ ಒಪ್ಪಿಸುವಂತೆ ನಗರ ಪೊಲೀಸ್ ಆಯುಕ್ತ ಮೇಘರಿಕ್ ಇಂದಿಲ್ಲಿ ಸೂಚಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ನಗರ ವ್ಯಾಪ್ತಿಯಲ್ಲಿನ ಎಲ್ಲ ಪೊಲೀಸ್ ಠಾಣೆಗಳಿಗೆ ತಮ್ಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಬೇಕು. ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವ ಫೆ.24ರ ಬಳಿಕ ತಮ್ಮ ಶಸ್ತ್ರಾಸ್ತ್ರಗಳನ್ನು ಮರಳಿ ಪಡೆದುಕೊಳ್ಳಬಹುದು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story