ಲೋಕನಾಥ್
ಮುಡಿಪು: ಮಂಗಳೂರು ವಿವಿಯ ಕಾರ್ಯಕಾರಿ ಅಭಿಯಂತರರ ಕಚೇರಿಯಲ್ಲಿ ಕಾಮಗಾರಿ ನಿರೀಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಲೋಕನಾಥ್ ಅವರು ಬುಧವಾರ ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅಸೌಖ್ಯದಿಂದಿದ್ದ ಅವರು ಬುಧವಾರ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಮೃತರು ಪತ್ನಿ, ಒಂದು ಹೆಣ್ಣು, ಎರಡು ಗಂಡು ಮಕ್ಕಳನ್ನು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಮಂಗಳೂರು ವಿವಿಯಲ್ಲಿ ಇವರು ಉತ್ತಮ ಕ್ರೀಡಾಪಟುವಾಗಿಯೂ ಗುರುತಿಸಿದ್ದರು.
Next Story