ರಸ್ತೆ ಅಪಘಾತ: ಸಾಫ್ಟ್‌ವೇರ್ ಎಂಜಿನಿಯರ್ ಸಾವು
ಬೆಂಗಳೂರು, ಮಾ.13: ದ್ವಿಚಕ್ರವಾಹನ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ ಘಟನೆ ಇಲ್ಲಿನ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಬೆಂಗಳೂರಿನ ಮಲ್ಲೇಶ್ ಪಾಳ್ಯ ನಿವಾಸಿ, ಸಾಫ್ಟ್‌ವೇರ್ ಎಂಜಿನಿಯರ್ ವಸಂತ್ (30) ಮೃತಪಟ್ಟವರು.
ವಸಂತ್ ರವಿವಾರ ರಜೆಯಿದ್ದ ಹಿನ್ನೆಲೆಯಲ್ಲಿ ಬೈಕ್‌ನಲ್ಲಿ ಸವಾರಿ ಹೋಗಿದ್ದರು. ಈ ವೇಳೆ ಬೆಳಗ್ಗಿನ ಜಾವ ಕೋಲಾರ ರಾಷ್ಟ್ರೀಯ ಹೆದ್ದಾರಿಯ ಕೊಳತೂರು ಗೇಟ್ ಬಳಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಪಕ್ಕದ ಕಾಲುವೆಗೆ ಬಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರಕರಣ ದಾಖಲಿಸಿಕೊಂಡಿರುವ ಹೊಸಕೋಟೆ ಗ್ರಾಮಾಂತರ ಠಾಣಾ ಪೊಲೀಸರು ತಿಳಿಸಿದ್ದಾರೆ.
Next Story