ಕೆಎಂಡಿಸಿ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ಸಲೀಂ ಎತ್ತಂಗಡಿ
ಬೆಂಗಳೂರು, ಎ.6: ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ಸಲೀಂರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯಿಂದ ಹಿಂಪಡೆದು ಅವರ ಮಾತೃ ಇಲಾಖೆಯಾದ ಸಹಕಾರ ಇಲಾಖೆಗೆ ಕಳುಹಿಸಲಾಗಿದೆ.
ಮೂಲಭೂತ ಸೌಲಭ್ಯ ಅಭಿವೃದ್ಧಿ ಇಲಾಖೆಯ ಸರಕಾರದ ಉಪಕಾರ್ಯದರ್ಶಿಯಾಗಿದ್ದ ಎನ್.ಟಿ.ಅಬ್ರೂ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
Next Story