ನೆಕ್ಕಿಲಾಡಿ: ಭಾರೀ ಗಾಳಿ, ಮಳೆಗೆ ಭೂಕುಸಿತ
ಉಪ್ಪಿನಂಗಡಿ, ಜೂ.29: ಇಲ್ಲಿನ 34ನೆ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಆದರ್ಶನಗರ ಎಂಬಲ್ಲಿ ಭಾರಿ ಗಾಳಿ ಮಳೆಗೆ ಆಸಿಯಮ್ಮ ಎಂಬವರ ಮನೆಯ ಅಂಗಳದಲ್ಲಿ ಭೂ ಕುಸಿತ ಉಂಟಾಗಿದೆ. ಭೂಕುಸಿತದ ಪರಿಣಾಮವಾಗಿ ಮನೆಯು ಬೀಳುವ ಸ್ಥಿತಿಯಲ್ಲಿದ್ದು, ಮನೆಮಂದಿ ಆತಂಕಕ್ಕೀಡಾಗಿದ್ದಾರೆ.
ಗ್ರಾಮ ಪಂಚಾಯತ್ ಸದಸ್ಯ ಶೇಖಬ್ಬ, 34ನೆ ನೆಕ್ಕಿಲಾಡಿ ಗ್ರಾಮ ಪಂಚಾಯತ್ನ ಗ್ರಾಮ ಕರಣಿಕ, ಪಿಡಿಒ, ಸಾಮಾಜಿಕ ಕಾರ್ಯಕರ್ತ ಅಬ್ದುರ್ರಹ್ಮಾನ್ ಯುನಿಕ್, ನೆಕ್ಕಿಲಾಡಿ ನಾಗರಿಕ ಅಭಿವೃದ್ಧಿ ಸಮಿತಿಯ ಸಂಘಟನಾ ಕಾರ್ಯದರ್ಶಿ ಖಲಂದರ್ ಶಾಫಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story