ಸಚಿವ ಪ್ರಮೋದ್ ಪ್ರವಾಸ
ಉಡುಪಿ, ಜೂ.30: ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಜು.1ರಂದು ಬೆಳಗ್ಗೆ 9:30ಕ್ಕೆ ಅಜ್ಜರಕಾಡು ಪುರಭವನದಲ್ಲಿ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ನಡೆಯುವ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವ ಹಿಸುವರು. ಬಳಿಕ 10ಕ್ಕೆ ಪುರಭವನದಲ್ಲಿ ನಡೆಯುವ ರೋಗವಾಹಕ ಆಶ್ರಿತ ರೋಗಗಳ ವಿರೋಧಿ ಮಾಸಾಚರಣೆ ಕಾರ್ಯಕ್ರಮ ದಲ್ಲಿ ಭಾಗವಹಿಸಿ, 10:30ಕ್ಕೆ ವಳಕಾಡು ಪ್ರೌಢಶಾಲೆಯ ಹೊಸ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊ ಳ್ಳುವರು. 11ಕ್ಕೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯುವ ರಾಜ್ಯಮಟ್ಟದ ಹಲಸಿನ ಹಬ್ಬದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಪರಾಹ್ನ 2:30ರಿಂದ 5ರವರೆಗೆ ಉಡುಪಿಯ ತಮ್ಮ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಂಜೆ 5:30ಕ್ಕೆ ಕೊಳಂಬೆ ಶಾಂತಿನಗರದ ಮಸೀದಿಗೆ ಭೇಟಿ, 6ಕ್ಕೆ ಹೂಡೆ ಮಸೀದಿಯಲ್ಲಿ ಇಫ್ತಾರ್ ಕೂಟದಲ್ಲಿ ಭಾಗವಹಿಸುವರು. 7ಕ್ಕೆ ಬೆಳ್ಳಂಪಳ್ಳಿ ಭಜನಾ ಮಂದಿರದಲ್ಲಿ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿ ಸುವರು ಎಂದು ಪ್ರಕಟನೆ ತಿಳಿಸಿದೆ.
Next Story