ಉಡುಪಿ: 11ರಂದು ವಿಶ್ವ ಜನಸಂಖ್ಯಾ ದಿನಾಚರಣೆ
ಉಡುಪಿ, ಜು.7: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘಗಳ ತರಬೇತಿ ಕೇಂದ್ರ ಅಂಬಲಪಾಡಿ, ಉಡುಪಿ ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಜು.11ರಂದು ಬೆಳಗ್ಗೆ 10ಕ್ಕೆ ಅಂಬಲಪಾಡಿಯಲ್ಲಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ತರಬೇತಿ ಕೇಂದ್ರದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story