ಅಕ್ರಮ ಮರಳು ಸಾಗಾಟ: ಲಾರಿ ವಶಕ್ಕೆ
ಮಂಗಳೂರು, ಜು.14: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದು ಬೆಳಗ್ಗಿನ ಜಾವ ಸುಮಾರು 3:20ಕ್ಕೆ ಠಾಣಾ ಇನ್ಸ್ಪೆಕ್ಟರ್ ಎಂ.ಡಿ.ಮಡ್ಡಿ ಅವರು ಕರ್ತವ್ಯದಲ್ಲಿದ್ದಾಗ ಬಿ.ಸಿ.ರೋಡ್ನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿಯನ್ನು ಕಂಡು ನಿಲ್ಲಿಸಲು ಸೂಚಿಸಿದ್ದಾರೆ.ಚಾಲಕ ಲಾರಿಯನ್ನು ತುಸು ದೂರದಲ್ಲಿ ನಿಲ್ಲಿಸಿ ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಪರಿಶೀಲಿಸಲಾಗಿ ಲಾರಿಯಲ್ಲಿ ಮರಳು ತುಂಬಿದ್ದು, ಯಾವುದೇ ಪರವಾನಿಗೆ ಇಲ್ಲದೆ ಮರಳನ್ನು ಸಾಗಾಟ ಮಾಡುತ್ತಿದ್ದುದು ಗಮನಕ್ಕೆ ಬಂದಿದೆ. ಈ ಬಗ್ಗೆ ಲಾರಿ ಚಾಲಕ ಹಾಗೂ ಮಾಲಕನ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story