ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಪುತ್ತೂರು, ಜು.17: ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಬಂಗಾರಡ್ಕ ಎಂಬಲ್ಲಿ ನಡೆದಿದೆ.
ಬಂಗಾರಡ್ಕ ದಿ.ನೀಲಪ್ಪ ನಾಯ್ಕ ಅವರ ಪತ್ನಿ ಕಮಲ(60) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕೂಲಿ ಕಾರ್ಮಿಕರಾಗಿದ್ದ ಕಮಲ ಅವರು ಕಳೆದ ಕೆಲ ಸಮಯಗಳಿಂದ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರಿಗೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
Next Story