ವಸ್ತ್ರ ತಯಾರಿಕಾ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತ್ಯು
ಕಾಸರಗೋಡು, ಜು.20: ವಸ್ತ್ರ ತಯಾರಿಕಾ ಘಟಕದ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಮಹಿಳೆಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ಕಣ್ಣೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಮೃತಪಟ್ಟವರನ್ನು ರಮ್ಯಾ (36) ಎಂದು ಗುರುತಿಸಲಾಗಿದೆ. ರಾತ್ರಿ ಪಾಳಿಯ ಕೆಲಸ ನಿರ್ವಹಿಸುತ್ತಿದ್ದಾಗ ಘಟನೆ ನಡೆದಿದೆ.
ಯಂತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ರಮ್ಯಾರ ಕೈಗಳು ಯಂತ್ರಕ್ಕೆ ಸಿಲುಕಿದ್ದು, ಛಿದ್ರಗೊಂಡಿದ್ದವು. ಗಂಭೀರ ಗಾಯಗೊಂಡಿದ್ದ ರಮ್ಯಾರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಯಾಗದೆ ಅವರಿಂದು ಮುಂಜಾನೆ ಮೃತಪಟ್ಟಿದ್ದಾರೆ.
Next Story