ಪಣಂಬೂರು ಠಾಣಾ ಸಿಬ್ಬಂದಿ ಭರತ್
ಮಂಗಳೂರು,ಜು.25: ಪಣಂಬೂರು ಪೊಲೀಸ್ ಠಾಣೆಯಲ್ಲಿ ಹೆಡ್ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭರತ್ (43) ಎಂಬವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಭರತ್ ಅವರು ಕಳೆದ ಒಂದು ವರ್ಷದಿಂದ ಪಣಂಬೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಒಂದು ವಾರದಿಂದ ಅಸೌಖ್ಯದಿಂದ ಇದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಎರಡು ದಿನಗಳ ಹಿಂದೆಯಷ್ಟೆ ಮರಳಿದ್ದರು.
ರವಿವಾರ ರಾತ್ರಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Next Story