ಹಿಲರಿ ಕ್ಲಿಂಟನ್ ಡೆಮಾಕ್ರಟಿಕ್ ಪಕ್ಷದಿಂದ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿಯಾಗಿ ಅಧಿಕೃತವಾಗಿ ಆಯ್ಕೆ
ಫಿಲಡೆಲ್ಪಿಯಾ, ಜು.27: ಅಮೆರಿಕದ ಡೆಮಾಕ್ರಟಿಕ್ ಪಕ್ಷದಿಂದ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿಯಾಗಿ ಹಿಲರಿ ಕ್ಲಿಂಟನ್ ಅಧಿಕೃತವಾಗಿ ಬುಧವಾರ ಆಯ್ಕೆಯಾಗಿದ್ದಾರೆ.ಇದರೊಂದಿಗೆ ಅಧ್ಯಕ್ಷ ಸ್ಥಾನಕ್ಕೆ ಪ್ರಮುಖ ಪಕ್ಷವೊಂದರಿಂದ ಅಭ್ಯರ್ಥಿಯಾಗಿ ಆಯ್ಕೆಯಾದ ಮೊದಲ ಮಹಿಳೆಯಾಗಿ ಇತಿಹಾಸ ಬರೆದಿದ್ದಾರೆ.
ಶ್ವೇತಭವನದಲ್ಲಿ ಆಡಳಿತ ನಡೆಸುವುದಕ್ಕಾಗಿ ನವೆಂಬರ್ 8ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಹಿಲರಿ ಕ್ಲಿಂಟನ್ ಮತ್ತು ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ನಡುವೆ ಹಣಾಹಣಿ ನಡೆಯಲಿದೆ.
ಇಲ್ಲಿ ನಡೆದ ಡೆಮಾಕ್ರಟಿಕ್ ಪಕ್ಷದ ರಾಷ್ಟ್ರೀಯ ಅಧಿವೇಶನದಲ್ಲಿ ಸಹಸ್ರಾರು ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸೆನೆಟರ್ ಬರ್ನಿ ಸ್ಯಾಂಡರ್ಸ್ ಅವರು ಹಿಲರಿ ಕ್ಲಿಂಟನ್ ಡೆಮಾಕ್ರಟಿಕ್ ಪಕ್ಷದಿಂದ ಅಧ್ಯಕ್ಷೀಯ ಅಭ್ಯರ್ಥಿ ಎಂದು ಅಧಿಕೃತವಾಗಿ ಪ್ರಕಟಿಸಿದರು. ಅಮೆರಿಕದ 240 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿ ಮಹಿಳಾ ಅಭ್ಯರ್ಥಿ ಪ್ರಮುಖ ಪಕ್ಷದಿಂದ ಅಧ್ಯಕ್ಷಿಯ ಚುನಾವಣೆಗೆ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
ಮಾಜಿ ವಿದೇಶಾಂಗ ಸಚಿವೆಯಾಗಿ ರಾಜಕೀಯ ಅನುಭವ ಪಡೆದಿರುವ 50ರ ಹರೆಯದ ಹಿಲರಿ ಕ್ಲಿಂಟನ್. ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಪತ್ನಿ.