ಪ.ಜಾತಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಹಾಸನ, ಆ.1: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2015-16ನೇ ಶೈಕ್ಷಣಿಕ ಸಾಲಿನಲ್ಲಿ ಪರಿಶಿಷ್ಟ ಜಾತಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಸದರಿ ಸಾಲಿನಲ್ಲಿ ಈ ಹಿಂದೆ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳಿಗಾಗಿ ದಿನಾಂಕ: 6/8/2016 ರಿಂದ 6/9/2016 ರ ವರೆಗೆ ಒಂದು ತಿಂಗಳ ಅವಧಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಆದುದರಿಂದ 2015-16ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಪ.ಜಾತಿ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಈ ಮೇಲ್ಕಂಡ ಅವಧಿಯೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ನಂತರದ ಅವಧಿಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ವೆಬ್ಸೈಟ್ www.sw.kar.nic.in ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸಕಲೇಶಪುರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Next Story