ಉಡುಪಿ: ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ
ಉಡುಪಿ, ಆ.27: ಉಡುಪಿ ಪರ್ಯಾಯ ಪೇಜಾವರ ಶ್ರೀಕೃಷ್ಣಮಠದ ವತಿಯಿಂದ ಶ್ರೀಕೃಷ್ಣಾಷ್ಟಮಿ ಪ್ರಯುಕ್ತ ಏರ್ಪಡಿಸಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಶನಿವಾರ ಮಧ್ವಮಂಟಪದಲ್ಲಿ ಬಹುಮಾನ ವಿತರಿಸಲಾಯಿತು.
ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ವಿಜೇತರಿಗೆ ಬಹುಮಾನ ವಿತರಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು. ವಾಸುದೇವ ಭಟ್ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ವಿಂಧ್ಯಾ ಆಚಾರ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
Next Story