ಕಾರು ಢಿಕ್ಕಿ: ವಿದ್ಯಾರ್ಥಿ ಮೃತ್ಯು
ಕಾಸರಗೋಡು, ಆ.28: ಕಾರು ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟ ಘಟನೆ ರವಿವಾರ ಸಂಜೆ ಪಾಲಕುನ್ನು ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಬೇಕಲದ ಪ್ರಶಾಂತ್ (16) ಎಂದು ಗುರುತಿಸಲಾಗಿದೆ.
ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪ್ರಶಾಂತ್ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನ ಅತಿ ವೇಗವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಈ ಬಗ್ಗೆ ಬೇಕಲ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
Next Story