ಛಾಯಾಚಿತ್ರಗ್ರಾಹಕರರ ಮಾನ್ಸೂನ್ ಗ್ರಾಮೀಣ ಕ್ರೀಡಾಕೂಟ
ಉಡುಪಿ, ಆ.28: ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಬೀಡಿನಗುಡ್ಡೆಯ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಜಿಲ್ಲಾ ವಾರ್ಷಿಕ ಮಾನ್ಸೂನ್ ಗ್ರಾಮೀಣ ಕ್ರೀಡಾಕೂಟ ರವಿವಾರ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಿದರು.
ಈ ಸಂದರ್ಭ ಅದಾನಿ ಯುಪಿಸಿಎಲ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ವಾಮನ್ ಬಂಗೇರ, ನಿಕಟಪೂರ್ವ ಅಧ್ಯಕ್ಷ ವಾಸುದೇವ ರಾವ್, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Next Story