ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ) ಮತ್ತು ಗ್ರಾಪಂ ಕಾರ್ಯದರ್ಶಿ ಗ್ರೇಡ್-1 ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಸರಕಾರವು ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ) ಮತ್ತು ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್-1 ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
825 ಪಿಡಿಒ ಮತ್ತು 809 ಗ್ರಾಪಂ ಕಾರ್ಯದರ್ಶಿ ಗ್ರೇಡ್-1 ಹುದ್ದೆಗಳಿಗೆ ಈ ನೇರ ನೇಮಕಾತಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದೆ. ಪರೀಕ್ಷಾ ಶುಲ್ಕ ಪಾವತಿಗೆ ಅಕ್ಟೋಬರ್ 18 ಕೊನೆಯ ದಿನವಾಗಿರುತ್ತದೆ.
ಸಾಮಾನ್ಯ ಅರ್ಹತೆ ಮತ್ತು ಇತರ ಅಭ್ಯರ್ಥಿಗಳು ಒಂದು ಹುದ್ದೆಗೆ 500 ರೂ. ಹಾಗೂ ಎರಡೂ ಹುದ್ದೆಗೆ ಅರ್ಜಿ ಸಲ್ಲಿಸಬಯಸುವುದಾದರೆ 750 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ-ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿಯಿದ್ದು, ಕ್ರಮವಾಗಿ 250 ರೂ. ಮತ್ತು 400 ರೂ. ಆಗಿರುತ್ತದೆ. ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ಇರಲಿದೆ.
ಹೆಚ್ಚಿನ ವಿವರಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ http://kea.kar.nic.inಗೆ ಭೇಟಿ ನೀಡುವಂತೆ ಪ್ರಕಟನೆ ತಿಳಿಸಿದೆ