ಉತ್ತರ ಕನ್ನಡದಲ್ಲಿ 53 ಗ್ರಾಮ ಲೆಕ್ಕಿಗ ಹುದ್ದೆಗಳು
ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕಗಳಲ್ಲಿ ಹಾಗೂ ಭೂಮಿ ಕೇಂದ್ರಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವಿರ: ಗ್ರಾಮ ಲೆಕ್ಕಿಗರ ಹುದ್ದೆಗಳ ಸಂಖ್ಯೆ ಒಟ್ಟು 53
ಅಭ್ಯರ್ಥಿಗಳಿಂದ ನಿಗದಿಪಡಿಸಿದ ನಮೂನೆಯಲ್ಲಿ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ.
ಆನ್ಲೈನ್ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 14 ಕೊನೆಯ ದಿನವಾಗಿದೆ. ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಅಭ್ಯರ್ಥಿಗಳು http://uttarakannada.nic.in ನ ಮೂಲಕ ಗ್ರಾಮ ಲೆಕ್ಕಿಗರ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪಿಯು ಬೋರ್ಡ್ ನಡೆಸುವ ಪಿಯುಸಿ ಪರೀಕ್ಷೆ ಅಥವಾ ICSE ಅಥವ CBSE ನಡೆಸುವಂತಹ 12ನೆ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ದೂರ ಶಿಕ್ಷಣದ ಮೂಲಕ ಪಿಯುಸಿ ಅಥವಾ ಸಮನಾಂತರ ವಿದ್ಯಾರ್ಹತೆ ಹೊಂದಿರುವವರು ಈ ಹುದ್ದೆಗಳಿಗೆ ಅರ್ಹರಿರುವುದಿಲ್ಲ.
ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಈ ಕೆಳಕಂಡ ವಯೋಮಿತಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳಾಗಿದ್ದು, ಪರಿಶಿಷ್ಟ ಜಾತಿ/ಪಂಗಡ/ಪ್ರವರ್ಗ-1 40ವರ್ಷಗಳು, 2ಎ/2ಬಿ/3ಎ/3ಬಿ 38ವರ್ಷಗಳು ಹಾಗೂ ಸಾಮಾನ್ಯ ವರ್ಗ 35ವರ್ಷಗಳು
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ/ಪಂಗಡ, ಪ್ರವರ್ಗ-1 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 100 ರೂ., ಇತರ ಅಭ್ಯರ್ಥಿಗಳಿಗೆ 200 ರೂ. (ಬ್ಯಾಂಕ್ ಶುಲ್ಕವನ್ನು ಹೊರತುಪಡಿಸಿ) ಇರುತ್ತದೆ.