ನೂತನ ಮುಖ್ಯ ಕಾರ್ಯದರ್ಶಿ ಸುಭಾಷ್ಚಂದ್ರಕುಂಟಿಯಾ?
ಬೆಂಗಳೂರು, ಸೆ.16: ತಿಂಗಳಾಂತ್ಯಕ್ಕೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್ ನಿವೃತ್ತಿ ಹೊಂದಲಿರುವ ಹಿನ್ನೆಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಪೈಪೋಟಿ ಆರಂಭವಾಗಿದೆ. ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಶಾಲಾ ಶಿಕ್ಷಣ ಮತ್ತು ಸಾಕ್ಷರ ಇಲಾಖೆಯ ಕಾರ್ಯದರ್ಶಿ ಸುಭಾಷ್ಚಂದ್ರ ಕುಂಟಿಯಾ ನೇಮಕ ಆಗುವ ಸಾಧ್ಯತೆಗಳಿವೆ.
ಮೊದಲಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರ ಹೆಸರು ಬಲವಾಗಿ ಕೇಳಿಬಂದಿತ್ತು. ಆದರೆ, ಇದೀಗ ಸುಭಾಷ್ಚಂದ್ರ ಕುಂಟಿಯಾ ಅವರ ಹೆಸರು ಮುಂಚೂಣಿಗೆ ಬಂದಿದ್ದು, ಅವರ ನಿಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸಿ ದ್ದಾರೆಂದು ಗೊತ್ತಾಗಿದೆ.ುಂಟಿಯಾ ಅವರ ನೇಮಕಕ್ಕೆ ಒಪ್ಪಿಗೆ ನೀಡುವಂತೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ರಾಜ್ಯ ಸರಕಾರ ಪತ್ರ ರವಾನಿಸಿದೆ ಎಂದು ತಿಳಿದುಬಂದಿದೆ.ಶಾ ಮೂಲದ ಸುಭಾಷ್ ಚಂದ್ರ ಕುಂಟಿಯಾ 1981ರ ತಂಡ ಐಎಎಸ್ ಅಧಿಕಾರಿಯಾಗಿದ್ದು, ಇನ್ನು ಒಂದು ವರ್ಷಕ್ಕೂ ಹೆಚ್ಚು ಕಾಲ ಅವರ ಅಧಿಕಾರವಧಿ ಇದೆ. 2016ರ ಜೂನ್ನಲ್ಲೇ ನಿವೃತ್ತಿ ಹೊಂದಬೇಕಿದ್ದ ಅರವಿಂದ ಜಾಧವ್ರ ಸೇವಾವಧಿಯನ್ನು ಮೂರು ತಿಂಗಳು ವಿಸ್ತರಣೆ ಮಾಡಲಾಗಿತ್ತು.
ಈ ಬೆಳವಣಿಗೆಗಳ ಮಧ್ಯೆಯೇ ಜಾಧವ್ ಹಾಗೂ ರತ್ನಪ್ರಭಾ ನಡುವೆ ಭೂ ಪರಭಾರೆ ಆರೋಪ ಸಂಬಂಧ ಮುಸುಕಿನ ಗುದ್ದಾಟದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸುಭಾಷ್ ಚಂದ್ರ ಕುಂಟಿಯಾ ಅವರನ್ನು ನಿಯೋಜಿಸಲು ಉತ್ಸುಕರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ