ಕೊರಗ ಮಕ್ಕಳಿಗೆ ವಿಶೇಷ ಕಲಿಕಾ ಶಿಬಿರ
ಉಡುಪಿ, ಡಿ.16: ಜಿಲ್ಲೆಯ ಸರಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ 10ನೆ ತರಗತಿ ಕಲಿಯುತ್ತಿರುವ ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ 6 ದಿನಗಳ ಸನಿವಾಸ ಕಲಿಕಾ ಶಿಬಿರವನ್ನು ಆದಿಉಡುಪಿ ಪ್ರೌಢಶಾಲೆ ಮತ್ತು ಕುಂಭಾಶಿಯಲ್ಲಿನ ಮಕ್ಕಳ ಮನೆಯಲ್ಲಿ ಆಯೋಜಿಸಲಾಗಿದೆ.
ಬೈಂದೂರು, ಕುಂದಾಪುರ ಹಾಗೂ ಬ್ರಹ್ಮಾವರ ವಲಯದ ಪ್ರೌಢಶಾಲೆಗಳ 10ನೆ ತರಗತಿ ಕೊರಗ ಸಮುದಾಯದ ವಿದ್ಯಾರ್ಥಿಗಳನ್ನು ಕುಂಭಾಶಿಯ ಮಕ್ಕಳ ಮನೆಯಲ್ಲಿ ನಡೆಯುವ ಶಿಬಿರಕ್ಕೆ ಹಾಗೂ ಕಾರ್ಕಳ, ಉಡುಪಿ ಮತ್ತು ಬ್ರಹ್ಮಾವರ ವಲಯದ ಶಾಲೆಗಳ ವಿದ್ಯಾರ್ಥಿಗಳನ್ನು ಆದಿಉಡುಪಿ ಪ್ರೌಢಶಾಲೆಯಲ್ಲಿ ನಡೆಯುವ ಶಿಬಿರಕ್ಕೆ ಈಗಾಗಲೇ ತಿಳಿಸಿರುವ ಪ್ರಕಾರ ಕರೆತರಲು ಸಂಬಂಧಿಸಿದ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಸೂಚಿಸಿದ್ದಾರೆ.
Next Story