ಫ್ಯಾಶನ್ ಟೆಕ್ನಾಲಜಿ ಉಚಿತ ತರಬೇತಿ
ಮಂಗಳೂರು, ಜ.5: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ, ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ನಿರುದ್ಯೋಗಿ ಮಹಿಳಾ/ಪುರುಷ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಫ್ಯಾಶನ್ ಟೆಕ್ನಾಲಜಿಯ ಉಚಿತ ತರಬೇತಿಯನ್ನು ತರಬೇತಿ ಭತ್ಯೆಯೊಂದಿಗೆ ನೀಡಲಾಗುವುದು.
ಆಸಕ್ತ ಹಿಂದುಳಿದ ವರ್ಗಗಳ ಪ್ರವರ್ಗ -1, 2ಎ, 3ಎ ಮತ್ತು 3ಬಿ ಗಳಿಗೆ ಸೇರಿದ, ಅರ್ಹ ನಿರುದ್ಯೋಗಿ ಮಹಿಳಾ/ಪುರುಷ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜ.17ರೊಳಗೆ ಅದೇ ಕಚೇರಿಗೆ ಸಲ್ಲಿಸಲು ತಿಳಿಸಿದೆ.
ಹೆಚ್ಚಿನ ಮಾತಿಗಾಗಿ ಇಲಾಖಾ ವೆಬ್ಸೈಟ್ www.backwardclasses.kar.nic.in ಗೆ ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Next Story