ಕುವೆಂಪು ವಿವಿಯಲ್ಲಿ ಬೋಧಕ-ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, ಮಾ.10: ಕುವೆಂಪು ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳಲ್ಲಿ ಮತ್ತು ಶಿವಮೊಗ್ಗದ ಸಹ್ಯಾದ್ರಿಕಾಲೇಜಿನಲ್ಲಿ ಉಪನ್ಯಾಸಕರು ಮತ್ತು ಇತರ ಶಿಕ್ಷಕೇತರ ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅನಿವಾಸಿ ಭಾರತೀಯರೂ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮಾ.30 ಕೊನೆಯ ದಿನವಾಗಿರುತ್ತದೆ.
ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ರಿಜಿಸ್ಟ್ರಾರ್, ಕುವೆಂಪು ವಿಶ್ವವಿದ್ಯಾನಿಲಯ, ಜ್ಞಾನ ಸಹ್ಯಾದ್ರಿ ಶಂಕರಘಟ್ಟ- 577451, ಶಿವಮೊಗ್ಗ ಇಲ್ಲಿಗೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗೆ ವಿವಿಯ ವೆಬ್ಸೈಟ್ http://www.kuvempu.ac.in/ ಅನ್ನು ಸಂದರ್ಶಿಸಬಹುದು ಎಂದು ವಿವಿಯ ಪ್ರಕಟನೆ ತಿಳಿಸಿದೆ.
Next Story