ಮಹಾರಾಷ್ಟ್ರ: 4,000 ವೈದ್ಯರಿಂದ ಮುಷ್ಕರ
ಮುಂಬೈ, ಮಾ.20: ತಮ್ಮ ಸಹೋದ್ಯೋಗಿಗಳ ಮೇಲೆ ನಡೆದ ಹಲ್ಲೆ ಘಟನೆಯನ್ನು ಖಂಡಿಸಿ ಮಹಾರಾಷ್ಟ್ರದಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚಿನ ನಿವಾಸಿ ವೈದ್ಯರು(ರೆಸಿಡೆಂಟ್ ಡಾಕ್ಟರ್ಸ್) ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ಮುಂಬೈಯ ಧುಲೆ ಹಾಗೂ ಸಿಯೊನ್‌ನಲ್ಲಿರುವ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಸಂಬಂಧಿಸಿ, ರೋಗಿಯ ಸಂಬಂಧಿಕರು ಆಸ್ಪತ್ರೆಯ ವೈದ್ಯಾಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದರು. ಇದನ್ನು ಖಂಡಿಸಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ನಿರತ ವೈದ್ಯರು ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತರೋರ್ವರು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರತಿಭಟನೆಯ ಪರಿಣಾಮ ಆಸ್ಪತ್ರೆಗಳಲ್ಲಿ ಹಿರಿಯ ನಿವಾಸಿ ವೈದ್ಯರ ಮೇಲೆ ಹೆಚ್ಚಿನ ಹೊರೆ ಬಿದ್ದಿದೆ. ಅದಾಗ್ಯೂ, ತುರ್ತು ವೈದ್ಯಕೀಯ ಸೇವೆಗಳ ಮೇಲೆ ಪರಿಣಾಮ ಉಂಟಾಗಿಲ್ಲ ಎಂದು ಮೂಲಗಳು ತಿಳಿಸಿವೆ.
Next Story