ಅಯೋಧ್ಯೆ ಪ್ರಕರಣದ ತ್ವರಿತ ವಿಚಾರಣೆಗೆ ಸುಪ್ರೀಂ ನಕಾರ
ಹೊಸದಿಲ್ಲಿ,ಮಾ.31: ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ನಡೆಸುವಂತೆ ಕೋರಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿತು.
ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದವನ್ನು ಮಾತುಕತೆಗಳ ಮೂಲಕ ಬಗೆಹರಿಸಿಕೊಳ್ಳುವ ಪ್ರಯತ್ನಗಳಾಗಬೇಕೆಂದು ಸರ್ವೋಚ್ಚ ನ್ಯಾಯಾಲಯವು ಮಾ.21 ರಂದು ಸಂಬಂಧಿತ ಎಲ್ಲ ಕಕ್ಷಿಗಳಿಗೆ ಸಲಹೆ ನೀಡಿತ್ತು. ಅಗತ್ಯವಾದರೆ ತಾನೇ ಪ್ರಧಾನ ಸಂಧಾನಕಾರನಾಗಿ ಕಾರ್ಯ ನಿರ್ವಹಿಸುವುದಾಗಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಹೇಳಿದ್ದರು.
Next Story